ಮಂಜುಳಾಗೆ ನೈಟಿಂಗೇಲ್ ಪ್ರಶಸ್ತಿ

08Kush05
Published on

ಕುಶಾಲನಗರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಬಿ.ಸಿ. ಮಂಜುಳಾ ಅವರಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಷನಲ್ ಪ್ಲೋರೆನ್ಸ್ ನೈಟಿಂಗೇಲ್ ನರ್ಸ್ಸ್-2023 ಪ್ರಶಸ್ತಿ ನೀಡಿ ಗೌರವಿಸಲಾಯಿತು.


ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈ ಪ್ರಶಸ್ತಿಯನ್ನು ಅತ್ಯುತ್ತಮವಾಗಿ ಸೇವೆ ಸಲ್ಲಿಸುವ ನರ್ಸ್‌ಗಳಿಗೆ ನೀಡುತ್ತಿದ್ದು, ಈ ಬಾರಿ ಮಂಜುಳಾ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಪ್ರಶಸ್ತಿ ವಿತರಣೆ ವೇಳೆ ನಾಡೋಜ ನ್ಯಾಯಮೂರ್ತಿ, ಮಾನವ ಹಕ್ಕು ಆಯೋಗದ ಮಾಜಿ ಅಧ್ಯಕ್ಷ ಡಾ.ಎಸ್.ಆರ್. ನಾಯಕ್, ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಸ್ಥಾಪಕ ಅಧ್ಯಕ್ಷ ಶರವಣ ಲಕ್ಷ್ಮಣ್, ರಾಜ್ಯಸಭೆ ಮಾಜಿ ಸದಸ್ಯ ಕೆ.ಸಿ. ರಾಮಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net