ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ

RAGHUMURTHY T clk MLA (1)
Published on

ಚಿತ್ರದುರ್ಗ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೇಮಕಾತಿಯಲ್ಲಿ ನನ್ನನ್ನು ಪರಿಗಣಿಸಬೇಡಿ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 2013, 2018, 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಮೂರು ಬಾರಿ ನನಗೆ ಅವಕಾಶ ಕಲ್ಪಿಸಿದ್ದು, ಕ್ಷೇತ್ರದ ಮತದಾರರು ನಿರಂತರವಾಗಿ ಆಶೀರ್ವದಿಸಿದ್ದಾರೆ. ಇದಕ್ಕೆ ತಮಗೂ, ಎಐಸಿಸಿ ವರಿಷ್ಠರಿಗೂ, ಮುಖಂಡರಿಗೂ, ಕಾರ್ಯಕರ್ತರಿಗೂ, ಪಕ್ಷಕ್ಕೂ ಋಣಿಯಾಗಿರುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಒಂದು ವೇಳೆ ನನ್ನನ್ನು ಪರಿಗಣಿಸುವ ಸಂಭವ ಏನಾದರು ಇದ್ದಲ್ಲಿ ಅನ್ಯತಾ ಭಾವಿಸದೆ, ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸದಂತೆ ಕೋರುತ್ತೇನೆ. ಪಕ್ಷಕ್ಕಾಗಲಿ, ಮತದಾರರಿಗಾಗಲಿ ಯಾವುದೇ ಸಂದರ್ಭದಲ್ಲೂ ಮುಜುಗರ ಆಗದ ರೀತಿಯಲ್ಲಿ ನಡೆದುಕೊಂಡಿದ್ದು, ಆ ಪರಂಪರೆ ಮುಂದುವರೆಸುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಸಹಕಾರವನ್ನು ಮಾತ್ರ ನಿರೀಕ್ಷಿಸುತ್ತೇನೆ ಎಂದು ಮನವಿ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net