ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ.!

ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ.!
Published on

ಹಾಸನ: ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತರಾಗಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.


ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೊತ್ಸವ ಸಮಾರಂಭದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಿಂದೆ ಕಂದಾಯ ಸಚಿವ ಆರ್. ಅಶೋಕ್ ಅವರೇ ಮಂಡ್ಯ ಜಿಲ್ಲೆ ಉಸ್ತುವಾರಿ ಆಗಿದ್ದರು. ನನಗೆ ತಾತ್ಕಾಲಿಕವಾಗಿ ಹಾಸನ ಜಿಲ್ಲೆಯ ಜೊತೆಗೆ ಹೆಚ್ಚುವರಿಯಾಗಿ ಮಂಡ್ಯ ಜಿಲ್ಲೆ ಉಸ್ತುವಾರಿ ವಹಿಸಲಾಗಿತ್ತು. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತೆ ಅಶೋಕ್ ಅವರಿಗೇ ಮಂಡ್ಯ ಜಿಲ್ಲೆ ಉಸ್ತುವಾರಿ ವಹಿಸಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.


ನಾನು ಮಂಡ್ಯ ಜಿಲ್ಲೆ ಉಸ್ತುವಾರಿ ವಹಿಸಿಕೊಂಡಿದ್ದ ಅವಧಿಯಲ್ಲಿ ಉತ್ತಮ ಕೆಲಸ ಮಾಡಿರುವ ತೃಪ್ತಿ ಇದೆ. ಹಾಸನ ಜಿಲ್ಲೆಯಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ ಎಂದರು.


ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವಿನ ಸಿಡಿ ಜಗಳ ನನಗೆ ಗೊತ್ತಿಲ್ಲ, ಅದು ಅವರ ವೈಯಕ್ತಿಕ ವಿಚಾರ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net