ಮಂಡ್ಯದವರೆಗೆ ಬೈಕ್ ರ‌್ಯಾಲಿ

SRP_11-03jpg
Published on

ಶ್ರೀರಂಗಪಟ್ಟಣ: ಪ್ರತಿ ಟನ್ ಕಬ್ಬಿಗೆ ವೈಜ್ಞಾನಿಕ ದರ ನಿಗದಿ ಹಾಗೂ ಹಾಲಿನ ದರ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ರಾಜ್ಯ ರೈತ ಸಂಘದ ತಾಲೂಕು ಘಟಕದ ಕಾರ್ಯಕರ್ತರು ಶುಕ್ರವಾರ ಬೈಕ್ ರ‌್ಯಾಲಿ ನಡೆಸಿದರು.

ಪಟ್ಟಣದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಆರಂಭವಾದ ಬೈಕ್ ರ‌್ಯಾಲಿ ಮಂಡ್ಯದವರೆಗೆ ಸಾಗಿತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಘದ ತಾಲೂಕು ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ, ಮುಖಂಡರಾದ ಪಾಂಡು, ದೊಡ್ಡಪಾಳ್ಯ ಜಯರಾಮೇಗೌಡ, ಕಡತನಾಳು ಬಾಲಕೃಷ್ಣ, ಬಿ.ಎಸ್.ರಮೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net