

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪ್ರಾಕಾರದಲ್ಲಿ ಅಕ ಶ್ರಾವಣ ಮಾಸ ನಿಮಿತ್ತ ಗುರುವಾರ ಸಾಮೂಹಿಕ ಅಷ್ಟೋತ್ತರ ಪಾರಾಯಣ ನೆರವೇರಿಸಲಾಯಿತು. ದೇಶದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ಪಾರಾಯಣದಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮುಂಚೆ ಶ್ರೀಮಠ ಪೀಠಾಪತಿ ಡಾ.ಸುಬುಧೇಂದ್ರ ತೀರ್ಥರು ಮೂಲ ಬೃಂದಾವನಕ್ಕೆ ವಿಶೇಷ ಅಭಿಷೇಕ, ಮೂಲ ರಾಮದೇವರ ಪೂಜೆ ನೆರವೇರಿಸಿ ಭಕ್ತರಿಗೆ ಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ರಾಯರ 352ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀಗಳು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ವೆಂಕಟೇಶ ಜೋಷಿ, ಡಾ.ವಾದಿರಾಜಾಚಾರ್ ಉಪಸ್ಥಿತರಿದ್ದರು.