ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಿ

09ydg03
Published on

ಯಾದಗಿರಿ: ಗ್ರಾಮೀಣ ಪ್ರದೇಶದಲ್ಲಿನ ಜನತೆ ಸರಕಾರಿ ಸೌಲಭ್ಯ ಪಡೆದು ಆಥರ್ಿಕವಾಗಿ ಸದೃಢರಾಗುವುದರ ಜತೆಗೆ ಮಕ್ಕಳ ಅರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಕಿವಿಮಾತು ಹೇಳಿದರು.

ಶನಿವಾರ ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಕೂಸಿನ ಮನೆ ಉದ್ಘಾಟಿಸಿ ಮಾತನಾಡಿ, ನರೇಗಾ ಯೋಜನೆಯಡಿ ಅತೀಹೆಚ್ಚು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ, ಅದರಲ್ಲಿ ಪ್ರಮುಖವಾಗಿ ಮಹಿಳಾ ಕೂಲಿ ಕಾಮರ್ಿಕ ಸಂಖ್ಯೆ ಹೆಚ್ಚಿದೆ. ಅವರು ಕೆಲಸಕ್ಕೆ ಹೋಗುವ ವೇಳೆ ತಮ್ಮ ಮಕ್ಕಳ ಲಾಲನೆ, ಪಾಲನೆಗಾಗಿ ಕೂಸಿನೆ ಮನೆ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.

6 ತಿಂಗಳಿಂದ 3 ವರ್ಷದ ಮಕ್ಕಳನ್ನು ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೋಷಣೆ ಮಾಡುವ ಉದ್ದೇಶದಿಂದ ರಾಜ್ಯ ಸರಕಾರ ಕೂಸಿನ ಮನೆ ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಕೂಲಿ ಕಾರ್ಮಿಕರ ಮಕ್ಕಳ ಪೋಷಣೆ ಮಾಡುವ ಜವಾಬ್ದಾರಿ ಹೊತ್ತುಕೊಂಡಿದೆ. ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ತಾಪಂ ಇಒ ಸೋಮಶೇಖರ ಬಿರಾದಾರ ಮಾತನಾಡಿ, ಪ್ರತಿನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುವ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ. ಮಕ್ಕಳು ತಾಯಿಯ ವಾತ್ಸಲ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಯೋಜನೆಯ ಪ್ರಮುಖ ಉದ್ದೇಶ. ಕೂಸಿನ ಮನೆಯಲ್ಲಿ ಮಕ್ಕಳಿಗಾಗಿ ಆಟಿಕೆ, ಶುದ್ಧ ಕುಡಿಯುವ ನೀರು, ಪೌಷ್ಠಿಕ ಆಹಾರ ಮತ್ತು ಅಕ್ಷರಭ್ಯಾಸ ಮಾಡಿಸಲಾಗುತ್ತದೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net