ಮಕ್ಕಳ ಆರೋಗ್ಯಕ್ಕೆ ಪೌಷ್ಟಿಕಾಹಾರ ಅಗತ್ಯ

oplus_131074
oplus_131074
Published on

ಚಿತ್ರದುರ್ಗ: ಮಕ್ಕಳಲ್ಲಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಗುರುತಿಸಿ ಅವರಿಗೆ ಪೌಷ್ಟಿಕಾಹಾರ ಒದಗಿಸಬೇಕೆಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಿರಿಯೂರು, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲೂಕುಗಳ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಪೌಷ್ಟಿಕ ಮಕ್ಕಳ ಪ್ರಮಾಣ ತಗ್ಗಿಸಲು ಕಾರ್ಯಾಗಾರ ನೂತನ ವಿಧಾನವಾಗಿದೆ. ಪ್ರತಿ ಗ್ರಾಮದ ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ಗುರುತಿಸಿ, ಸುಧಾರಿತ ಪೌಷ್ಟಿಕಾಹಾರ ಸೇವನೆಗೆ ಅಂಗನವಾಡಿ ಕೇಂದ್ರಗಳಲ್ಲಿ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.
ಆರು ವರ್ಷದೊಳಗಿನ ಮಕ್ಕಳಿಗೆ ಸಾಂಸ್ಥಿಕ ಹಾಗೂ ಸಮುದಾಯ ಮಟ್ಟದಲ್ಲಿ ಅಪೌಷ್ಟಿಕತೆ ನಿವಾರಣೆಯಾಗಬೇಕಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಬಿ.ಜಾನಕಿ, ಲಲಿತಮ್ಮ, ಪೋಷಣ ಅಭಿಯಾನ ವ್ಯವಸ್ಥಾಪಕ ಕರಕಪ್ಪ ಮೇಟಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net