

ಯಾದಗಿರಿ : ಪಾಲಕರು ಕಡ್ಡಾಯವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಡಿ ಇಲ್ಲಿನ ಲಕ್ಷ್ಮೀ ದೇವಸ್ಥಾನದಲ್ಲಿ ಸೋಮವಾರ ಆಯೋಜಿಸಿದ್ದ ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಆರೋಗ್ಯದ ಮಹತ್ವ ಏನು ಎಂಬುದನ್ನು ಈಗಾಗಲೇ ಕರೊನಾ ನಮಗೆಲ್ಲರಿಗೆ ಅರ್ಥ ಮಾಡಿಸಿದೆ. ಹೀಗಾಗಿ ಬೆಳೆಯುವ ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು ಜಾಗ್ರತೆ ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರ, ಉಪಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಉಚಿತವಾಗಿ ಈ ಲಸಿಕೆ ನಿಡಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕೆ ಕೊಡಿಸುವ ಮೂಲಕ ದಡಾರ ಮತ್ತು ರುಬೆಲ್ಲಾ ರೋಗದಿಂದ ದೂರವಿಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಅಭಿಯಾನ ಪರಿಣಾಮಕಾರಿಯಾಗಿ ನಡೆಸಲು ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಲಸಿಕೆಯಿಂದ ವಂಚಿತ ಮಕ್ಕಳು ಮತ್ತು ಗರ್ಭಿಣಿಯರನ್ನು ಲಸಿಕಾಕರಣಕ್ಕೆ ಕರೆತರಬೇಕು. ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ವಯೋಮಾನಕ್ಕೆ ಅನುಗುಣ ಲಸಿಕೆಗಳನ್ನು ನೀಡಲಾಗುತ್ತದೆ. ಪಾಲಕರು ನಿರ್ಲP್ಷÀ್ಯ ವಹಿಸಿದರೆ ದಡಾರ ರೋಗ ಮಾರಣಾಂತಿಕವಾಗಬಹುದು. ಆದ್ದರಿಂದ ಮಕ್ಕಳಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕು. ನಿಗದಿತ ಸಮಯಕ್ಕೆ ಲಸಿಕೆ ಹಾಕಿಸಬೇಕು. ಈ ವಿಚಾರದಲ್ಲಿ ಜಾಗರೂಕರಾಗಿರಬೇಕು. ಅಮೃತ ಸಮಾನ ಲಸಿಕೆಗಳನ್ನು ಕಾಲಕಾಲಕ್ಕೆ ಕೊಡಿಸುವಂತೆ ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಲಸಿಕೆಯಿಂದ ಹೊರಗುಳಿದ ಗರ್ಭಿಣಿಯರು ೧೫೪೧, ಎರಡು ವರ್ಷದೊಳಗಿನ ಮಕ್ಕಳು ೮೮೮೪, ಎರಡರಿಂದ ಐದು ವರ್ಷದೊಳಗಿನ ೨೨೪೦ ಮಕ್ಕಳಿದ್ದು, ಇವರೆಲ್ಲರಿಗೆ ಲಸಿಕೆ ನೀಡಲು ೯೨೨ ನಿಗದಿತ ಸ್ಥಳಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಜಿಪA ಸಿಇಒ ಗರೀಮಾ ಪನ್ವಾರ್ ಮಾತನಾಡಿ, ದಡಾರ ಮತ್ತು ರುಬೆಲ್ಲಾ ರೋಗ ನಿರ್ಮೂಲನೆ ಸಂಕಲ್ಪದೊAದಿಗೆ ತೀವ್ರತರವಾದ ಇಂದ್ರಧನುಷ್ ಅಭಿಯಾನಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ. ಇಂದಿನಿAದ ಆ.೧೨ರವರೆಗೆ ಮೊದಲ ಸುತ್ತಿನ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ಸೆ.೧೧ರಿಂದ ೧೬ರವರೆಗೆ ಎರಡನೇ, ಅ.೯ರಿಂದ ೧೪ರವರೆಗೆ ಮೂರನೇ ಸುತ್ತಿನ ಲಸಿಕಾ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.
ಪ್ರಭಾರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಷಿö್ಮÃಕಾಂತ್ ಒಂಟಿಪೀರ, ಆರ್‌ಸಿಎಚ್ ಅಧಿಕಾರಿ ಡಾ.ಮಲ್ಲಪ್ಪ, ಜಿಲ್ಲಾ P್ಷÀಯರೋಗ ನಿರ್ಮೂಲನೆ ಅಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್, ಜಿಲ್ಲಾ ಸರ್ವೇP್ಷÀಣಾಧಿಕಾರಿ ಡಾ.ಸಾಜೀದ್ ಮುಬಾಶಿರ್, ವೈದ್ಯಾಧಿಕಾರಿಗಳಾದ ಡಾ.ಹಣಮಂತರೆಡ್ಡಿ, ಡಾ.ಭಗವಂತ ಅನ್ವರ್, ಡಾ.ತುಳಸಿರಾಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮಮೂರ್ತಿ, ಮಲ್ಲಿಕಾರ್ಜುನ ಪೂಜಾರಿ, ಸಿಡಿಪಿಒ ಲಾಲ್‌ಸಾಬ್ ಇದ್ದರು.