ಮಕ್ಕಳ ಉಜ್ವಲ ಭವಿಷ್ಯ ರೂಪಿಸಿ

Samman
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ
ಅಸಂಘಟಿತ ಕಾರ್ಮಿಕ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಉತ್ತಮ ಶಿಕ್ಷಣ ನೀಡುವ ಮೂಲಕ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪಿ. ರಾಜಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ರ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕ ರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾರ್ಮಿಕರ ಸಮ್ಮಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮತ್ತು ಆರೋಗ್ಯ ಪ್ರಾಥಮಿಕ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ಒದಗಿಸಲಾಗುತ್ತಿದೆ. ಪೋಷಕರು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹೆಜ್ಜೆ ಇಡಬೇಕು ಎಂದರು.
ಸಹಾಯಕ ಕಾರ್ಮಿಕ ಆಯುಕ್ತೆ ಆರತಿ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಆಯುಕ್ತ ರಾಮಚಂದ್ರ ಗಡ್ಡದ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾ ಣ ಕಾರ್ಮಿ ಕರ ಕಲ್ಯಾಣ ಮಂಡಳಿಯ ಸದಸ್ಯ ಶಂಕರ ಸಂಗಾವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ್, ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ , ಕಲಬುರಗಿ ಜಿಲ್ಲಾ ಕಟ್ಟಡ ಕಾಮರ್ಿಕರ ಒಕ್ಕೂಟದ ಸದಸ್ಯ ಪ್ರಭು ಯಳಸಂಗಿ, ಹಿರಿಯ ಕಾರ್ಮಿಕ ನಿರೀಕ್ಷಕ ರವಿಂದ್ರಕುಮಾರ ಇದ್ದರು.
ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಸ್ವಾಗತಿಸಿದರು. ಶಿವಲೀಲಾ ಡಿಗ್ಗಿ ನಿರೂಪಣೆ ಮಾಡಿದರು. ಕಾರ್ಮಿಕರಿಗೆ ಶ್ರಮ ಸಮ್ಮಾನ್ ಮತ್ತು ಧನ ಸಹಾಯ ವಿತರಣೆ ಮಾಡಲಾಯಿತು.

ದೇಶದಲ್ಲಿ ಸುಮಾರು ಶೇ.90ರಷ್ಟು ಅಸಂಘಟಿತ ಕಾಮರ್ಿಕರಿದ್ದು, ಶೇ.50ರಷ್ಟು ಕಾರ್ಮಿಕರು ಮಾತ್ರ ಸರ್ಕಾರಿ ಸೌಲಭ್ಯ ಪಡೆಯಲು ಮುಂದೆ ಬರುತ್ತಿದ್ದಾರೆ. ಕಾರ್ಮಿಕ ವರ್ಗ ಮತ್ತು ಸಂಘಟನೆಗಳು ತಮಗೆ ರೂಪಿಸಿರುವ ಹಲವಾರು ಕಲ್ಯಾಣ ಕಾರ್ಯಕ್ರಮಗಳ ಲಾಭ ಪಡೆಯಬೇಕು.
ಡಾ.ಪಿ.ರಾಜಾ, ಸಿಇಒ,
ಜಿಪಂ ಕಲಬುರಗಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net