

ಚಿತ್ರದುರ್ಗ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಗರದಲ್ಲಿ ಬುಧವಾರ ಜಾಗೃತಿ ಜಾಥಾ ನಡೆಯಿತು. ಸಂಪಿಗೆ ಸಿದ್ದೇಶ್ವರ ಪ್ರೌಢಶಾಲಾ ಆವರಣದಲ್ಲಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣವಾಸುದೇವ್,ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಮಕ್ಕಳನ್ನು ಶಾಲೆಗೆ ಕಳುಹಿಸಿ-ಕೆಲಸಕ್ಕಲ್ಲ,ಮಕ್ಕಳ ದುಡಿಮೆ ಜೀವನವಿಡಿ ಬವಣೆ,ಶಿಕ್ಷಣವಿಲ್ಲದ ಬಾಳು ಅಂಧಕಾರದ ಗೋಳು ಇತ್ಯಾದಿ ಬಾಲ, ಶೋರ ಕಾರ್ಮಿಕ ಪದ್ಧತಿ ವಿರೋಧಿ ಘೋಷಣೆಗಳೊಂದಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಸಾಗಿದರು.ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾ ವೀರವನಿತೆ ಒನಕೆ ಒಬವ್ವ ವೃತ್ತದ ಬಳಿ ಬಂದಾಗ ಮಾನವ ಸರಪಳಿ ನಿರ್ಮಿಸಲಾಯಿತು.
ಈ ವೇಳೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರತಿಜ್ಞಾ ವಿಧಿ ಬೋಧಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್,ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ,ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ,ಕಾರ್ಯದರ್ಶಿ ಆರ್.ಗಂಗಾಧರ್,ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಸಿ.ಪ್ರಭಾಕರ್,ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿ.ಸವಿತಾ,ಡಿಡಿಪಿಐ ಎಂ.ನಾಸೀರುದ್ದೀನ್,ಕಾರ್ಮಿಕ ಅಧಿಕಾರಿ ಬಿ.ಜಿ.ಚಂದ್ರಶೇಖರಯ್ಯ,ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್‌ಕುಮಾರ್,ಎಸ್‌ಜೆಎಂ ಕಾನೂನು ಕಾಲೇಜು ಪ್ರಾಚಾರ‌್ಯ ದಿನೇಶ್,ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ಮುಖ್ಯಶಿಕ್ಷಕ ಪ್ರಕಾಶ್,ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ,ಎಸ್‌ಜೆಎಂ ಕಾನೂನು ಕಾ ಲೇಜು,ಅಗಸನಕಲ್ಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು,ವಿವಿಧ ಸಂಘಟನೆಗಳ ಸದಸ್ಯರಿದ್ದರು.