ಮಕ್ಕಳ ಪಾಲನೆಗೆ ತಾಳ್ಮೆ, ಸಹನೆ ಅಗತ್ಯ

11ydg01
ಯಾದಗಿರಿಯ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಿಶುಪಾಲನಾ ಕೇಂದ್ರಗಳ ಕೇರ್ ಟೇಕರ್‌ಗಳ ತರಬೇತಿ ಕಾರ್ಯಾಗಾರದಲ್ಲಿ ತಾಪಂ ಇಒ ಬಸವರಾಜ ಶರಬೈ ಮಾತನಾಡಿದರು.
Published on

ಯಾದಗಿರಿ: ಬೆಳೆಯುವ ಮಕ್ಕಳು ಸದಾ ಸೃಜನಾತ್ಮಕ ಚಟುವಟಿಕೆಯಲ್ಲಿ ತೊಡಗಿರುತ್ತವೆ. ಅವುಗಳ ಲಾಲನೆ, ಪಾಲನೆ ವಿಷಯದಲ್ಲಿ ಆರೈಕೆದಾರರಲ್ಲಿ ಸಹನೆ ಇರಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಬೈ ಸಲಹೆ ನೀಡಿದರು.

ತಾಪಂ ಕಚೇರಿಯ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಶಿಶುಪಾಲನಾ ಕೇಂದ್ರಗಳ ಕೇರ್ ಟೇಕರ್‌ಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಅವರು, ಸರ್ಕಾರ ಗ್ರಾಮೀಣ ಭಾಗದ ಮಹಿಳಾ ಕೂಲಿ ಕಾರ್ಮಿಕರ ಮಕ್ಕಳ ಆರೋಗ್ಯ ಮತ್ತು ಆರೈಕೆಗಾಗಿ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ೬ ವರ್ಷದೊಳಗಿನ ಮಕ್ಕಳನ್ನು ಅಲ್ಲಿ ದಾಖಲಿಸಲಾಗುತ್ತದೆ ಎಂದರು.

ಕೂಲಿ ಕೆಲಸಕ್ಕೆ ಹೋಗುವ ತಾಯಂದಿರು ತಮ್ಮ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಟ್ಟು ಹೋದರೆ, ಅವರು ಕೆಲಸ ಮಾಡಿ ಬರುವವರೆಗೆ ಕೂಸಿನ ಮನೆಯಲ್ಲಿ ಮಗುವಿನ ಆರೈಕೆ ಮಾಡಲಾಗುತ್ತದೆ. ಆರೈಕೆದಾರರು ಸ್ವಂತ ಮಕ್ಕಳಂತೆ ಕಾಣಬೇಕು. ಮನೆಯಲ್ಲಿ ಮೂಲಸೌಲಭ್ಯ, ಪ್ರಥಮ ಚಿಕಿತ್ಸೆ, ಆಟಿಕೆ-ಕಲಿಕಾ ಸಾಮಗ್ರಿ, ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ ಕ್ರಮ ಸೇರಿ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಲಾಗುತ್ತದೆ ಎಂದು ತಿಳಿಸಿದರು.

ಯೋಜನಾಧಿಕಾರಿ ಶಶಿಧರ ಹಿರೇಮಠ, ಸಹಾಯಕ ಲೆಕ್ಕಾಧಿಕಾರಿ ಕಾಶೀನಾಥ, ವ್ಯವಸ್ಥಾಪಕ ಶಿವರಾಯ, ಅನ್ಸರ್ ಪಟೇಲ್, ಭೀಮರಡ್ಡಿ ಪಾಟೀಲ್, ಉಷಾ, ಶರಣಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net