ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ

28 HANUR 2
Published on

ಹನೂರು: ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆ ಇರುತ್ತದೆ. ಆದರೆ ಅವಕಾಶ ಸಿಗದ ಪರಿಣಾಮ ಸುಪ್ತವಾಗಿರುತ್ತದೆ.

ಗಾಗಿ ಶಾಲಾ ಹಂತದಿಂದಲೇ ಶಿಕ್ಷಕರು ಮಕ್ಕಳಿಗೆ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸಬೇಕು. ಸುಪ್ತ ಪ್ರತಿಭೆಯನ್ನು ಹೊರತೆಗೆದು ಅಗತ್ಯ ಮಾರ್ಗದರ್ಶನ ನೀಡುವ ಮೂಲಕ ಸಾಧನೆ ಮಾಡಲು ಪ್ರೇರಣೆ ನೀಡಬೇಕು. ಹನೂರು ಶೈಕ್ಷಣಿಕ ವಲಯದ ವಿದ್ಯಾರ್ಥಿಗಳು ಇದುವರೆಗೂ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಿ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೋಟಿ ಕಂಠ ಗಾಯನವನ್ನು ವಿದ್ಯಾರ್ಥಿಗಳ ಜತೆಗೂಡಿ ಹಾಡಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕ ಕಿರಣ್‌ಕುಮಾರ್, ದಿನೇಶ್, ಪ್ರಾಥಮಿಕ ಶಾಲಾ ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಬಿಆರ್‌ಸಿ ಕೃಷ್ಣ, ತಾಲೂಕಿನ ಶಿಕ್ಷಕರು ಹಾಗೂ ವಿವಿಧ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net