ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ವೇದಿಕೆ

15 HANUR 2
Published on
  • ಚಾಮರಾಜನಗರ : ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರ ವೇದಿಕೆಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆಯುವಂತೆ ತಾಲೂಕು ಕ್ರಿಕೆಟ್ ಕ್ಲಬ್ ಅಧ್ಯಕ್ಷ ಅಭಿಲಾಷ್ ತಿಳಿಸಿದರು.
  • ಹನೂರು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಸೋಮವಾರ ತಾಲೂಕು ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
  • ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಉತ್ತಮ ಕ್ರಿಕೆಟ್ ಪಟುಗಳಿದ್ದಾರೆ. ಆದರೆ ಅಗತ್ಯ ಮಾರ್ಗದರ್ಶನ, ಸಲಹೆ ಹಾಗೂ ತರಬೇತಿ ನೀಡಲು ಕ್ಲಬ್ ಇರಲಿಲ್ಲ. ಇದನ್ನು ಮನಗಂಡು ಕಳೆದ ವರ್ಷ ಕ್ರಿಕೆಟ್ ಕ್ಲಬ್ ರಚಿಸಲಾಗಿದ್ದು, ಹಲವು ಪಂದ್ಯಾವಳಿಯನ್ನು ನಡೆಸಲಾಗಿದೆ. ಇದೀಗ ಮಕ್ಕಳಿಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡುವ ಸಲುವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ಪ್ರತಿಭೆಯ ಅನಾವರಣಕ್ಕೆ ಸಹಕಾರಿಯಾಗಿದೆ. ಆದ್ದರಿಂದ ಪಾಲಕರು ಈ ಬಗ್ಗೆ ಮನದಟ್ಟು ಮಾಡಿಕೊಂಡು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಕ್ಲಬ್ ವತಿಯಿಂದ ಇನ್ನಿತರ ಆಟೋಟ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

  • ದೈಹಿಕ ಶಿಕ್ಷಣ ಶಿಕ್ಷಕ ರಿಯಾಜ್ ಮಾತನಾಡಿ, ಪ್ರತಿ ಮಗುವಿನಲ್ಲೂ ತನ್ನದೇ ಆದ ಆಸಕ್ತಿದಾಯಕ ಪ್ರತಿಭೆ ಇರುತ್ತದೆ. ಆದರೆ ಅವಕಾಶದ ಕೊರತೆಯಿಂದ ಸುಪ್ತವಾಗಿರುತ್ತದೆ. ಆದ್ದರಿಂದ ಪಾಲಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸಾಧನೆ ಮಾಡುವತ್ತ ಪ್ರೇರೆಪಿಸಬೇಕು ಎಂದು ಸಲಹೆ ನೀಡಿದರು.

  • ಪಟ್ಟಣ ಪಂಚಾಯಿತಿ ಸದಸ್ಯ ಸೋಮಶೇಖರ್, ಮಾಜಿ ಸದಸ್ಯ ಬಸವರಾಜು, ಶಿಕ್ಷಕ ವೆಂಕಟರಾಜು, ಕ್ರಿಕೆಟ್ ಕ್ಲಬ್ ಕಾರ್ಯದರ್ಶಿ ರಿಜ್ವಾನ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net