ಮಕ್ಕಳ ಪ್ರತಿಭೆ ಅನಾವರಣಕ್ಕೆ ಕ್ರೀಡೆ ಸಹಕಾರಿ

Painting Compitation
ಸಿದ್ದಾಪುರದಲ್ಲಿ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು.
Published on

ಸಿದ್ದಾಪುರ: ಜಿಲ್ಲಾ, ತಾಲೂಕು ಪಂಚಾಯಿತಿ, ಸಿದ್ದಾಪುರ ಗ್ರಾಮ ಪಂಚಾಯಿತಿ ವತಿಯಿಂದ 76 ನೇ ಸ್ವಾತಂತ್ರೊೃೀತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಇಲ್ಲಿನ ಜಿಎಂಪಿ ಶಾಲಾ ಆವರಣದಲ್ಲಿ ಶನಿವಾರ ಗ್ರಾಮೀಣ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದಾಪುರ ಗ್ರಾಪಂ ಅಧ್ಯಕ್ಷ ಪ್ರೇಮಾ ಗೋಪಾಲ್, ಅಮೃತ ಮಹೋತ್ಸವ ಅಂಗವಾಗಿ ಗ್ರಾಮ ಪಂಚಾಯಿತಿ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಪಿಡಿಒ ಗಣೇಶ್ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ ಎಂದು ಹೇಳಿದರು.
ಹಗ್ಗ-ಜಗ್ಗಾಟ, ಪ್ರಬಂಧ, ಚಿತ್ರಕಲೆ, ಭಾಷಣ ಸೇರಿದಂತೆ ಹಲವು ಸಾಂಸ್ಕೃತಿಕ ನಡೆದವು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ, ಸದಸ್ಯರಾದ ರೀನಾ ತುಳಿಸಿ, ಮೀನಾ, ಅಬೀತಾ, ಪ್ರಮೀಳಾ, ಸಮೀರಾ, ಪ್ರೇಮಾ ,ಜಾಫರ್, ಸೈನುಲ್ಲ, ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net