ಮಕ್ಕಳ ಪ್ರತಿಭೆ ತಿಳಿಯಲು ಅನುಕೂಲ

Untitled design (4)
ಅರಕೇರಾ ತಾಲೂಕಿನ ಮುಸ್ವೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳೊಂದಿಗೆ ಗ್ರಾಪಂ ಅಧ್ಯಕ್ಷೆ ಚನ್ನಮ್ಮ ರಾಠೋಡ್, ಭೂದಾನಿ ಭೀಮರಾಯ ಗೌಡ, ಎಸ್ಡಿಎಂಸಿ ಅಧ್ಯಕ್ಷ ರಾಮಪ್ಪ ಮೇಸ್ತ್ರಿ, ಕ್ಷೇತ್ರ ಶಿಕ್ಷಣ ಸಂಯೋಜಕ ಶರಣಪ್ಪ ಗಬ್ಬೂರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿರುಪನಗೌಡ, ಮುಖ್ಯ ಶಿಕ್ಷಕ ರಾಚಪ್ಪ ತಂಬಾಕು ಇತರರಿದ್ದರು.
Published on

ಅರಕೇರಾ: ಮಕ್ಕಳು ಪ್ರತಿಭಾ ಕಾರಂಜಿ ಮೂಲಕ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಕ್ಲಸ್ಟರ್, ಬ್ಲಾಕ್, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅನುಕೂಲವಾಗಲಿದೆ ಎಂದು ಸಿಆರ್‌ಪಿ ಶ್ರೀಶೈಲ ತಳವಾರ ಹೇಳಿದರು.


ತಾಲೂಕಿನ ಮುಷ್ಟೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.


ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿ, ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ. ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲವನ್ನು ಹೊಂದಲು ವೇದಿಕೆಯಾಗಿದೆ ಎಂದರು.


ಶ್ರುತಿ ಸಂಸ್ಕೃತಿ ಸಂಸ್ಥೆ ತಾಲೂಕು ಸಂಯೋಜಕ ರಾಮಣ್ಣ ಎನ್ ಗಣೇಕಲ್ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶ ಸಿಗುತ್ತದೆ. ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಕಾರ್ಯಕ್ರಮ ಪ್ರೋತ್ಸಾಹಿಸುತ್ತದೆ. ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರತಿಭಾಕಾರಂಜಿಯಿಂದ ಸಾಧ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net