

ರಾವಂದೂರು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಡಯಟ್‌ನ ಹಿರಿಯ ಉಪನ್ಯಾಸಕ ರವಿ ಪ್ರಸನ್ನ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಹರಿನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಅತ್ತಿಗೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಒಬ್ಬರಲ್ಲಿ ಒಂದೊಂದು ಪ್ರತಿಭೆಯಿದ್ದು ಪಾಲಕರು ಹಾಗೂ ಶಿಕ್ಷಕರು ಆ ಪ್ರತಿಭೆಯನ್ನು ಪ್ರೋತ್ಸಾಹಿಸಿದಾಗ ಸಮಾಜದ ಆದರ್ಶ ವಿದ್ಯಾರ್ಥಿಗಳಾಗುತ್ತಾರೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಶಿವರಾಜು ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ತುಂಬ ಸಹಕಾರಿಯಾಗಲಿದೆ ಎಂದು ತಿಳಿಸಿದರು
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂಸಿ ಪ್ರಶಾಂತ್, ಗ್ರಾಪಂ ಅಧ್ಯಕ್ಷೆ ಕಾಮಾಕ್ಷಮ್ಮ, ಉಪಾಧ್ಯಕ್ಷೆ ಪವಿತ್ರಾ ಪ್ರದೀಪ್, ಗಿರಿಜಮ್ಮ, ಅತ್ತಿಗೋಡು ಪ್ರೌಢಶಾಲಾ ಮುಖ್ಯ ಶಿಕ್ಷಕ ನಾಗಶೆಟ್ಟಿ, ಇಸಿಒ ಸ್ವಾಮಿ, ಬಿಆರ್‌ಪಿಗಳಾದ ಶ್ರೀನಿಧಿ, ಶಿವಶಂಕರ್, ರವೀಂದ್ರ, ಗ್ರಾಮಸ್ಥರಾದ ಎಚ್.ಸಿ. ಚಂದ್ರೇಗೌಡ , ಸುರೇಶ, ರಮೇಶ್, ಬಸವರಾಜ, ದಶರಥ, ಶಂಕರೇಗೌಡ, ವಾಸು, ಹರೀಶ್, ಜೈ ಕುಮಾರ್, ಸೋಮಶೇಖರ್, ಸಿಆರ್‌ಪಿ ಗುರು ರಾಘವೇಂದ್ರ, ಮುಖ್ಯ ಶಿಕ್ಷಕ ಎಚ್.ಎಸ್.ಮಂಜುನಾಥ್ ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.