ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
Published on

ಹಾಸನ : ಬೇಸಿಗೆ ಶಿಬಿರಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿ, ಈ ನಿಟ್ಟಿನಲ್ಲಿ ಎಲ್ಲಾ ಮಕ್ಕಳು ಬೇಸಿಗೆ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಭಾರತ್ ಸೇವಾದಳದ ಜಿಲ್ಲಾಧ್ಯಕ್ಷ ಕಮಲ್ ಕುಮಾರ್ ಮನವಿ ಮಾಡಿದರು

ಭಾರತ್ ಸೇವಾದಳ ಜಿಲ್ಲಾ ಸಮಿತಿ ಹಾಗೂ ಶಿಕ್ಷಣ ಇಲಾಖೆಯ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಮಹಾರಾಜ ಪಾರ್ಕ್‌ನಲ್ಲಿರುವ ಭಾರತ್ ಸೇವಾದಳದ ಜಿಲ್ಲಾ ಕಚೇರಿ ಆವರಣದಲ್ಲಿ ಮಕ್ಕಳಿಗೆ ಆಯೋಜಿಸಲಾಗಿದ ಬೇಸಿಗೆ ಶಿಬಿರದ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ರಜೆ ವೇಳೆ ಮಕ್ಕಳು ಕೇವಲ ಮೊಬೈಲ್ ಮತ್ತು ಇನ್ನಿತರ ಯಾಂತ್ರಿಕ ಯುಗಕ್ಕೆ ಮಾರುಹೋಗದೆ,ಇಂತಹ ಶಿಬಿರಗಳಿಂದ ಹೆಚ್ಚು ಹೆಚ್ಚು ಕಲಿಯಲು ಅವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಕಸಾಪ ಮಾಜಿ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಮಾತನಾಡಿ, ವರ್ಷಪೂರ್ತಿ ಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡು ಮಾನಸಿಕ ಒತ್ತಡ ಅನುಭವಿಸುತ್ತಿರುವ ಮಕ್ಕಳಿಗೆ, ಬೇಸಿಗೆ ಶಿಬಿರ ಸಹಕಾರಿಯಾಗಿವೆ, ಇತ್ತೀಚಿನ ದಿನಗಳಲ್ಲಿ ಅಂಕ ಆಧಾರಿತ ಪಠ್ಯಕ್ಕೆ ಹೆಚ್ಚಿನ ಹೊತ್ತು ನೀಡಲಾಗುತ್ತಿದ್ದು, ಮಕ್ಕಳಿಗೆ ಅದರ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ತುಂಬಾ ಅಗತ್ಯವಿದೆ ಎಂದರು

ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ ಪರಿಷತ್ ಅಧ್ಯಕ್ಷೆ ಚೈತ್ರ ಮಂಜೇಗೌಡ, ಭಾರತ್ ಸೇವಾದಳದ ವಲಯ ಸಂಘಟಕಿ ರಾಣಿ, ವರದರಾಜು, ಶ್ವೇತ, ವಿಜಯಲಕ್ಷ್ಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net