ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿದ ಆದ್ಯತೆ : ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ಎಸ್.ದತ್ತೇಶ್‌ಕುಮಾರ್ ಹೇಳಿಕೆ

10 HANUR 1
Published on
  • ಚಾಮರಾಜನಗರ: ಪ್ರತಿಯೊಬ್ಬರೂ ನಿರ್ದಿಷ್ಟ ಗುರಿ ಇಟ್ಟುಕೊಳ್ಳುವ ಮೂಲಕ ಓದಿನ ಕಡೆಗೆ ಹೆಚ್ಚಿನ ಗಮನ ನೀಡಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಮಾನಸ ಫೌಂಡೇಷನ್ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ಎಸ್ ದತ್ತೇಶ್‌ಕುಮಾರ್ ಸಲಹೆ ನೀಡಿದರು.
  • ಹನೂರು ತಾಲೂಕಿನ ಬಂಡಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಾಕ್ಟಿಕಲ್ ರೆಕಾರ್ಡ್ ಬುಕ್ ವಿತರಿಸಿ ಮಾತನಾಡಿದರು.
  • ಹನೂರು ಭಾಗವು ಹೆಚ್ಚಾಗಿ ಗ್ರಾಮೀಣ ಪ್ರದೇಶದಿಂದ ಕೂಡಿದೆ. ಹಾಗಾಗಿ ಈ ಹಿಂದೆ ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ನಿರ್ಲಕ್ಷ್ಯ ವಹಿಸುತ್ತಿದ್ದರು. ಆದರೀಗ ಶಿಕ್ಷಣದ ಮಹತ್ವವನ್ನು ಅರಿತು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಶೈಕ್ಷಣಿಕ ಪ್ರಗತಿಗೆ ಸ್ಫೂರ್ತಿಯಾಗಿದ್ದಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಹ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು, ಶೈಕ್ಷಣಿಕವಾಗಿ ಪ್ರಗತಿ ಹೊಂದುತ್ತಿರುವುದು ಮೆಚ್ಚುವ ಸಂಗತಿ ಎಂದರು.
  • ಮಾನಸ ಶಿಕ್ಷಣ ಸಂಸ್ಥೆಯ ಸಂಯೋಜಕ ರಾಮಕೃಷ್ಣ, ನಿಸರ್ಗ ಪಿಯು ಕಾಲೇಜಿನ ಪ್ರಾಂಶುಪಾಲ ಕೃಷ್ಣೇಗೌಡ, ಬಂಡಳ್ಳಿ ಕಾಲೇಜಿನ ಪ್ರಾಂಶುಪಾಲ ಮುತ್ತುರಾಜು, ಆಡಳಿತ ಮಂಡಳಿ ಉಪಾಧ್ಯಕ್ಷ ಜಸ್ಸಿಂಪಾಷ, ಗ್ರಾಪಂ ಸದಸ್ಯರಾದ ನಾಗಯ್ಯ, ನಾಗರಾಜು, ಮುಖಂಡರಾದ ವೆಂಕಟಾಚಲ, ಶ್ರೀನಿವಾಸ ಆಚಾರಿ, ಸೋಮಣ್ಣ, ಶ್ರೀನಿವಾಸ್, ನಾಗೇಂದ್ರ ಮತ್ತಿತರರು ಹಾಜರಿದ್ದರು .
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net