ಮಕ್ಕಳ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ

11BK2
ಬಸವಕಲ್ಯಾಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ, ವೆಂಕಟೇಶ, ತಹಸೀಲ್ದಾರ್ ದತ್ತಾತ್ರೇಯ ಗಾದಾ, ಸಿಡಿಪಿಒ ಗೌತಮ ಶಿಂಧೆ, ಬಿಇಒ ಸಿದ್ದವೀರಯ್ಯ ರುದ್ನೂರ, ಆರ್‌ಎಲ್‌ಎಚ್‌ಪಿ ನಿರ್ದೇಶಕಿ ಸರಸ್ವತಿ ಇದ್ದರು.
Published on

ಬಸವಕಲ್ಯಾಣ: ಮಕ್ಕಳ ಸಮಸ್ಯೆ ಹಕ್ಕುಗಳ ಸಂರಕ್ಷಣೆ ಎಲ್ಲರ ಕರ್ತವ್ಯ. ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಧಿತ ಇಲಾಖೆಗೆ ನಿರ್ದೇಶನ ನೀಡುವುದಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಹೇಳಿದರು.

ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್‌ಎಲ್‌ಎಚ್‌ಪಿ) ಮೈಸೂರು, ಬೀದರ್ ಜಿಲ್ಲಾಡಳಿತ ಹಾಗೂ ಬಸವಕಲ್ಯಾಣ ತಾಲೂಕು ಆಡಳಿತ ಸಹಯೋಗದಡಿ ಮಕ್ಕಳ ದಿನ ನಿಮಿತ್ತ ಬಸವ ಮಹಾಮನೆ ಪರಿಸರದಲ್ಲಿ ಸೋಮವಾರ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಾದದಲ್ಲಿ ಮಕ್ಕಳ ಸಮಸ್ಯೆ ತಿಳಿದುಕೊಂಡು ಪರಿಹರಿಸಲು ಸಾಧ್ಯವಾಗಲಿದೆ. ಮಕ್ಕಳು ಮೂಲಭೂತ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ರೀತಿ ಕಾರ್ಯಕ್ರಮ ಆಯೋಜಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಸಂಪೂರ್ಣ ಹಕ್ಕುಗಳು ದೊರೆಯಲು ಅನುಕೂಲವಾಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ದತ್ತಾತ್ರೇಯ ಗಾದಾ ಮಾತನಾಡಿ, ಸಂಸ್ಥೆಯು ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೪೦ ಹಳ್ಳಿಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಿದೆ. ಸಂವಾದದಲ್ಲಿ ಮಕ್ಕಳು ಸಮಸ್ಯೆಗಳನ್ನು ತಿಳಿಸುತ್ತಿದ್ದು, ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಸಿಪಿಐ ಅಲಿಸಾಬ್ ಮಾತನಾಡಿ, ಮಕ್ಕಳು ಎತ್ತಿರುವ ಕೆಲ ಗಂಭೀರ ಸಮಸ್ಯೆಗಳ ಪರಿಹಾರ ನಿಟ್ಟಿನಲ್ಲಿ ಸಂಬಂಧಿತ ಇಲಾಖೆಗಳಿಂದ ಸಮನ್ವಯ ಸಾಧಿಸಲಾಗುವುದು. ಪ್ರತಿ ಹಳ್ಳಿಗೆ ಭೇಟಿ ನೀಡುವಂತೆ ಇಲಾಖೆ ಸಿಬ್ಬಂದಿಗೆ ತಿಳಿಸಲಾಗುವುದು. ಮಕ್ಕಳು ಯಾವುದೇ ಸಮಸ್ಯೆ ಕಂಡು ಬಂದರೂ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬಹುದು ಎಂದರು.

ಆಯೋಗದ ಸದಸ್ಯ ವೆಂಕಟೇಶ ಮಾತನಾಡಿದರು. ಸಿಡಿಪಿಒ ಗೌತಮ ಶಿಂಧೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ, ಸಂಸ್ಥೆ ನಿರ್ದೇಶಕಿ ಸರಸ್ವತಿ, ಕಾರ್ಮಿಕ ಇಲಾಖೆ ಸಿಬ್ಬಂದಿ ಬಾಬು, ಸಂಸ್ಥೆ ಸಿಬ್ಬಂದಿ ಸಂಪತಕುಮಾರ, ಶಶಿಕುಮಾರ, ನಾಗರಾಜ ಶೀಲವಂತ, ಸ್ನೇಹಲತಾ ಮೇತ್ರೆ, ನಟರಾಜ, ಸುನಂದಾ, ಪ್ರಿಯಾಂಕಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net