ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹಕ್ಕುಗಳು ಸಹಕಾರಿ

15-pnp 1
ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಕೆ.ಎನ್.ಕಿಶೋರ್‌ಕುಮಾರ್ ಗಿಡ ನೆಡುವ ಮೂಲಕ ಉದ್ಘಾಟಿಸಿದರು.
Published on

ಪಾಂಡವಪುರ: ಸಂವಿಧಾನ ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಕೊಟ್ಟಿದ್ದು, ತಾಯಿಯ ಗರ್ಭದಲ್ಲಿರುವ ಮಗುವಿಗೂ ಬದುಕುವ ಹಕ್ಕಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಕೆ.ಎನ್.ಕಿಶೋರ್‌ಕುಮಾರ್ ತಿಳಿಸಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ತಾಲೂಕಿನ ಚಿಕ್ಕಬ್ಯಾಡರಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಗುವಿಗೂ ಹಕ್ಕು ಇರುವುದರಿಂದಲೇ ಕಾನೂನಿನ ಚೌಕಟ್ಟಿನಲ್ಲಿ ಮಕ್ಕಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದರು.

ಬದುಕುವ, ರಕ್ಷಣೆಯ, ಅವಕಾಶ ಮತ್ತು ವಿಕಾಸ ಹೊಂದುವ ಹಾಗೂ ಭಾಗವಹಿಸುವ ಹಕ್ಕುಗಳನ್ನು ಮಕ್ಕಳಿಗೆ ಕೊಡಲಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹಕ್ಕುಗಳು ಸಹಾಯಕವಾಗಿದೆ ಎಂದು ತಿಳಿಸಿದರು.

ಅಪರ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಪದ್ಮ, ವಕೀಲರ ಸಂಘದ ಅಧ್ಯಕ್ಷ ಕೆ.ಕಾಳೇಗೌಡ, ತಾಪಂ ಇಒ ಲೋಕೇಶ್‌ಮೂರ್ತಿ, ಪಿಡಿಒ ಬಸವರಾಜು, ಕಾಲೇಜು ಪ್ರಾಂಶುಪಾಲೆ ಯಶೋದಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net