ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಾಗಲಿ

15SNK1
ನಿಡಸೋಸಿಯ ಸರ್ಕಾರಿ ಗಂಡುಮಕ್ಕಳ ಶಾಲೆಯಲ್ಲಿ ಏರ್ಪಡಿಸಿದ್ದ ತಾಲೂಕುಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಅಕ್ಕಪ್ಪ ಪದ್ಮಣ್ಣವರ ಕ್ರೀಡಾಜ್ಯೋತಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು. ನಿಜಲಿಂಗೇಶ್ವರ ಸ್ವಾಮೀಜಿ, ಎ.ಎಸ್.ಕೋಠಿವಾಲೆ, ರುದ್ರಪ್ಪ ಡೋಣಗಿ, ಮಂಗಲ ಪಾಂಡವ್, ರುಕ್ಮಿಣಿ ಕೀಲಿಪುಟ್ಟಿ ಇತರರಿದ್ದರು.
Published on

Children's all-round development Belagavi

ಸಂಕೇಶ್ವರ : ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಮಾಜ, ಶಿಕ್ಷಣ ಇಲಾಖೆ ಮತ್ತು ಶಿಕ್ಷಕರು ಕೈಜೋಡಿಸಬೇಕು ಎಂದು ನಿಡಸೋಸಿ ಮಠದ ಉತ್ತರಾಧಿಕಾರಿ ನಿಜಲಿಂಗೇಶ್ವರ ಸ್ವಾಮೀಜಿ ಹೇಳಿದರು. ಸಮೀಪದ ನಿಡಸೋಸಿಯ ಸರ್ಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕುಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಅಕ್ಕಪ್ಪ ಪದ್ಮನ್ನವರ ಮಾತನಾಡಿ, ಹುಕ್ಕೇರಿ ತಾಲೂಕಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದರೂ ಅತ್ಯುತ್ತಮವಾಗಿ ಕ್ರೀಡಕೂಟ ಆಯೋಜಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು. ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಬಾಲಕರ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲದಾಳ ಮತ್ತು ಬಾಲಕಿಯ ವಿಭಾಗದಲ್ಲಿ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಿಡಸೋಸಿ ಶಾಲಾ ಮಕ್ಕಳು ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎಸ್.ಕೋಠಿವಾಲೆ, ಎಸ್‌ಡಿಎಂಸಿ ಅಧ್ಯಕ್ಷ ರುದ್ರಪ್ಪ ಡೋಣಗಿ, ಗ್ರಾಪಂ ಅಧ್ಯಕ್ಷೆ ಮಂಗಲ ಪಾಂಡವ್, ಭೀಮರಾವ್ ದಾದುಗೋಳ, ಯುವ ಮುಖಂಡ ಸಂದೀಪ ಪಾಟೀಲ, ಮೌಲಾಲಿ ಜಮಾದಾರ, ಮುಖ್ಯ ಶಿಕ್ಷಕಿ ರುಕ್ಮಿಣಿ ಕೀಲಿಪುಟ್ಟಿ, ಆರ್.ಬಿ.ನೇಗಳಿ ಇತರರಿದ್ದರು. ಶಿಕ್ಷಕಿ ವೀಣಾ ಅಂಬೆವಾಡಿ ಸ್ವಾಗತಿಸಿದರು. ಎಂ.ಬಿ.ಕುಂಬಾರ ನಿರೂಪಿಸಿದರು. ಜಿತೇಂದ್ರ ಎಸ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net