ಮಕ್ಕಳ ಹಕ್ಕು, ಕಾಯ್ದೆಗಳ ಅರಿವು ಮೂಡಿಸಿ

1111111
Published on

ವಿಜಯವಾಣಿ ಸುದ್ದಿಜಾಲ ದಾರವಾಡ
ಮಕ್ಕಳ ರಕ್ಷಣೆ ಮತ್ತು ಅವರ ಉತ್ತಮ ಭವಿಷ್ಯ ನಿರೂಪಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳ ಮೂಲಕ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಿದೆ. ಅವುಗಳ ಅನುಷ್ಠಾನ ಅಽಕಾರಿಗಳ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಆರ್.ಟಿ.ಇ., ಪೋಕ್ಸೊ, ಬಾಲನ್ಯಾಯ ಮಂಡಳಿ ಮತ್ತು ವಿವಿಧ ಇಲಾಖೆಗಳ ಮಕ್ಕಳ ಅಭಿವೃದ್ಧಿ ಯೋಜನೆಗಳ ಕುರಿತು ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಲೆಯಲ್ಲಿ ಮಕ್ಕಳಿಗೆ ಸುರಕ್ಷತೆ ಮತ್ತು ಅಸುರಕ್ಷತೆ ಬಗ್ಗೆ ತಿಳಿವಳಿಕೆ ನೀಡಬೇಕು. ಬಾಲ್ಯವಿವಾಹಗಳಾಗದಂತೆ ತಡೆಯಬೇಕು. ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಜೈಲು ಶಿಕ್ಷೆ ಇದೆ. ಈ ಕುರಿತು ಮಕ್ಕಳು, ಪಾಲಕರಲ್ಲಿ ಅರಿವು ಮೂಡಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಽಕಾರಿಗಳ ಸಮಿತಿ ರಚಿಸಲಾಗಿದೆ. ಅವರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಮಕ್ಕಳ ರಕ್ಷಣೆಗಾಗಿ ಜಾರಿಗೆ ಬಂದಿರುವ ದೌರ್ಜನ್ಯ ತಡೆ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಈ ಕಾರ್ಯಗಳಿಂದ ಸಂಬAಽಸಿದ ಇಲಾಖೆಗಳ ಅಽಕಾರಿಗಳು ಜಾರಿಕೊಳ್ಳಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net