

ಕಲಬುರಗಿ : ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರ್.ಟಿ.ಇ, ಪೋಕ್ಸೋ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಸಿಇಒ ಭನ್ವರಸಿಂಗ್ ಮೀನಾ, ಎಸ್ಪಿ ಇಶಾ ಪಂತ್, ಡಿಸಿಪಿ ಅಡ್ಡೂರು ಶ್ರೀನಿವಾಸುಲು, ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ಮೊದಲಾದವರಿದ್ದರು.