ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಕರ್ತವ್ಯ

Oplus_131072
ಹುಲಸೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಸಂಸತ್ ಮತ್ತು ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನೆ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಶಿವರಾಜ ಖಪಲೆ ಉದ್ಘಾಟಿಸಿದರು.ನಡೆಯಿತು. ಶಿವರಾಜ ಖಪಲೆ, ಸೂರ್ಯಕಾಂತ ಪಾಟೀಲ್, ರೇಣುಕಾ ಸಜ್ಜನಶೆಟ್ಟಿ ಇತರರಿದ್ದರು.
Published on

ಹುಲಸೂರು: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದು ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಶಿವರಾಜ ಖಪಲೆ ಹೇಳಿದರು.

ಸರ್ಕಾರಿ ಪ್ರೌಢಶಾಲೆಯಲ್ಲಿ ಯುನಿಸೆಫ್, ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಶ್ರೀ ರೇವಣಸಿದ್ಧೇಶ್ವರ ಶೈಕ್ಷಣಿಕ ಹಾಗೂ ಸಮಾಜ ಕಲ್ಯಾಣ ಅಭಿವೃದ್ಧಿ ಸಂಘ ಹುಲಸೂರು ಇವರ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಸಂಸತ್ ಮತ್ತು ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದೆ ಅವರು, ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ, ಹಲ್ಲೆ ತಡೆಯಲು ಜಾರಿಯಾದ ಮಕ್ಕಳ ರಕ್ಷಣೆ ಕಾಯ್ದೆ ಬಹಳ ಪರಿಣಾಮಕಾರಿಯಾಗಿದೆ. ಇದರ ಜತೆಗೆ ಹಲವು ಕಾಯ್ದೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಕಾರಿಯಾಗಿವೆ ಎಂದರು.

ಮುಖ್ಯಗುರು ಸೂರ್ಯಕಾಂತ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರೇವಣಸಿದ್ಧೇಶ್ವರ ಶೈಕ್ಷಣಿಕ ಮತ್ತು ಸಮಾಜ ಕಲ್ಯಾಣ ಅಭಿವೃದ್ಧಿ ಸಂಘದ ನಿರ್ದೇಶಕಿ ಸುಲೋಚನಾ ಚಿಲ್ಲಾಬಟ್ಟೆ ಮಾತನಾಡಿದರು. ರೇಣುಕಾ ಸಜ್ಜನಶೆಟ್ಟಿ, ಹೀರಾಬಾಯಿ, ಸರಿತಾ ಇತರರಿದ್ದರು. ಸುಪ್ರಿಯಾ ಶರಣಯ್ಯ ಸ್ವಾಗತಿಸಿ, ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net