ಮಕ್ಕಳ ಹಕ್ಕುಗಳನ್ನು ಗೌರವಿಸಿ

Malegaon
Published on

ಬೀದರ್: ಮಕ್ಕಳ ಹಕ್ಕುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಜಿಪಂ ಸದಸ್ಯ ವಿಜಯಕುಮಾರ ಎ. ಪಾಟೀಲ್ ಗಾದಗಿ ಹೇಳಿದರು.

ತಾಲೂಕಿನ ಮಾಳೆಗಾಂವ್ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಉದ್ಘಾಟಿಸಿ ಮಾತನಾಡಿ, ಪ್ರತಿ ಮಗು ಸಹ ತನ್ನದೇ ಆದ ಹಕ್ಕುಗಳನ್ನು ಹೊಂದಿದೆ. ಬಾಲ್ಯ ವಿವಾಹ, ಬಾಲ ಕಾರ್ಮಿಕದಂಥ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಬೇಕು. ಉತ್ತಮ ಶಿಕ್ಷಣ ಕಲ್ಪಿಸಿ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಮಲ್ಕಾಪುರೆ ಮಾತನಾಡಿ, ಮಕ್ಕಳಿಗೆ ಅವರ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಗ್ರಾಮಸಭೆ ಉದ್ದೇಶವಾಗಿದೆ. ಪಾಲಕರು, ಶಿಕ್ಷಕರು ಸೇರಿದಂತೆ ಎಲ್ಲರೂ ಮಕ್ಕಳ ಹಕ್ಕುಗಳನ್ನು ಅರಿಯಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಕಾಶೀನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಪ್ರೇಮಲತಾ, ಡಾನ್ ಬೊಸ್ಕೊ ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿಗಳು ಇದ್ದರು. ಪಂಡಿತ ಸಿತಾಳಗೇರಾ ಸ್ವಾಗತಿಸಿದರು. ಸಾಲೋಮನ್ ನಿರೂಪಣೆ ಮಾಡಿದರು. ಪಂಢರಿ ಬರಿದಾಬಾದ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net