ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ ಟೈಮ್ಸ್ ಅಂತಾರಾಷ್ಟ್ರೀಯ ಶಾಲೆ

30_HSN_02
Published on

ಹಾಸನ: ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಯ ತರಗತಿಗಳು ಶುಕ್ರವಾರದಿಂದ ಆರಂಭವಾಗಿದ್ದು, ಶಾಲೆಗೆ ಸೇರಿರುವ ಎಲ್ಲ ಮಕ್ಕಳನ್ನು ಆತ್ಮೀಯವಾಗಿ ಬರ ಮಾಡಿಕೊಳ್ಳಲಾಗಿದೆ ಎಂದು ಟೈಮ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ. ಟೈಮ್ಸ್ ಗಂಗಾಧರ್ ತಿಳಿಸಿದರು.

ನಗರದ ವಿಜಯನಗರ ಬಡಾವಣೆಯಲ್ಲಿರುವ ಟೈಮ್ಸ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಶಾಲೆಗೆ ಆಹ್ವಾನಿಸಿ ಮಾತನಾಡಿದ ಅವರು, ಬೇಸಿಗೆ ರಜೆ ಮುಗಿಸಿ ಮೊದಲ ಶಾಲಾ ದಿನದಂದು ನಗುಮೊಗದಿಂದ ಬಂದ ಚಿಣ್ಣರನ್ನು ಶಾಲೆಯ ಎಲ್ಲ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಲಾಗಿದೆ. ಶಾಲಾ ಆರಂಭದ ಮೊದಲ ದಿನದ ಅಂಗವಾಗಿ ಪ್ರಾರಂಭದಲ್ಲಿ ಶಾಲೆಯ ಪ್ರಾಂಶುಪಾಲರು ವಿದ್ಯಾ ದೇವತೆಗೆ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರನ್ನು ಹೂಗುಚ್ಛ ನೀಡಿ, ನಂತರ ಎಲ್ಲ ವಿದ್ಯಾರ್ಥಿಗಳಿಗೆ ಆರತಿ ಮಾಡಿ ತಿಲಕಯಿಟ್ಟು, ಸಿಹಿ ನೀಡಿ ಸ್ವಾಗತಿಸಲಾಯಿತು ಎಂದರು.

ಮೊದಲ ದಿನವಾಗಿದ್ದರಿಂದ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರು ವಿವಿಧ ಚಟುವಟಿಕೆಗಳನ್ನು ಮಾಡಿಸಿದರು. ಪ್ರತಿ ವರ್ಷಕ್ಕಿಂತ ಈ ವರ್ಷ ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಮಾರ್ಗದರ್ಶನ ನೀಡಲಾಗಿದೆ. ಮಕ್ಕಳಿಗೆ ಪಠ್ಯ ಬೋಧನೆಯ ಜತೆ ಜತೆಗೆ ಪಠ್ಯೇತರ ಚಟುವಟಿಕೆ, ಕ್ರೀಡೆ ಹೀಗೆ ಪ್ರತಿಯೊಂದರಲ್ಲೂ ತೊಡಗಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ವೇಳೆ ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net