ಮಕ್ಕಳನ್ನು ಕೆಲಸಕ್ಕೆ ಕಳುಹಿಸದೆ ಶಿಕ್ಷಣ ಕೊಡಿಸಿ: ಲಿಂಗರಾಜು

ಮಕ್ಕಳನ್ನು ಕೆಲಸಕ್ಕೆ ಕಳುಹಿಸದೆ ಶಿಕ್ಷಣ ಕೊಡಿಸಿ: ಲಿಂಗರಾಜು
Published on

 ಹಾಸನ: ನಾವು ಸುಡಗಾಡು ಸಮಾಜದಲ್ಲಿ ಹುಟ್ಟಿದ್ದೇವೆ. ಆದರೆ, ನಮ್ಮ ಮಕ್ಕಳು ನಮ್ಮ ವೃತ್ತಿಯನ್ನು ಅನುಸರಿದೆ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಯನ್ನು ಪಡೆದುಕೊಳ್ಳುವಂತಾಗಬೇಕು ಎಂದು ಎಸ್‌ಸಿ, ಎಸ್‌ಟಿ ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಲಿಂಗರಾಜು ಎಂದು ಹೇಳಿದರು

ನಗರದ ಮಾನವ ಬಂಧುತ್ವ ವೇದಿಕೆ ಸಭಾಂಗಣದಲ್ಲಿ ಜಿಲ್ಲಾ ಸುಡುಗಾಡು ಸಿದ್ದರ ಮಹಾ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಮ್ಮ ಸಮುದಾಯವರ ಸಂಖ್ಯೆ ಕಡಿಮೆ ಇದ್ದರೂ ಬೇರೆಯಾವ ಸಮಾಜಕ್ಕೂ ಕಡಿಮೆ ಇಲ್ಲ ಎಂಬಂತೆ ನಮ್ಮ ಜನಾಂಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಲು ಪ್ರತಿವರ್ಷವೂ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಪೋಷಕರು ತಮ್ಮ ಮಕ್ಕಳನ್ನು ಚಿಕ್ಕವಯಸ್ಸಿನಲ್ಲೇ ಕೆಲಸಕ್ಕೆ ಹಾಕದೆ ಶಿಕ್ಷಣ ಕೊಡಿಸುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಡಬೇಕು ಎಂದು ತಿಳಿಸಿದರು.

ನಮ್ಮ ಜನಾಂಗದಲ್ಲಿ ಯಾರಾದರೂ ಒಳ್ಳೆಯ ಕೆಲಸ ಮಾಡುವುದು ಕಂಡರೆ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕೇ ಹೊರತು ಕಾಲು ಎಳೆಯುವ ಕೆಲಸ ಮಾಡಬಾರದು. ಸಂಘಟಿತರಾಗುವ ಮೂಲಕ ಸಮುದಾಯವನ್ನು ಅಭಿವೃದ್ಧಿಗೊಳಿಸುವತ್ತ ಗಮನ ಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸುಡುಗಾಡು ಸಿದ್ದರ ಮಹಾ ಸಂಘದ ತಾಲ್ಲೂಕು ಅಧ್ಯಕ್ಷ ಕಿರಣ್ ಕುಮಾರ್, ಅಲೆಮಾರಿ ಸಂಘದ ಉಪಾಧ್ಯಕ್ಷ ರಂಗಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುಸಿದ್ದಪ್ಪ, ಮಾಜಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಹರೀಶ್, ಸದಸ್ಯ ಲಿಂಗಪ್ಪ, ತಾಲ್ಲೂಕು ಗೌರವಾಧ್ಯಕ್ಷ ರಾಜಣ್ಣ, ಜಗನ್ನಾಥ್, ಕರಿಯಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net