ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ

4ujjani
Published on

ಉಜ್ಜಿನಿ: ಪೂಜೆ, ಪುನಸ್ಕಾರ ಮತ್ತು ಧ್ಯಾನದಿಂದ ಏಕಾಗ್ರತೆ, ಮಾನಸಿಕ ನೆಮ್ಮದಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಕ್ಕಳನ್ನು ಪ್ರೇರೇಪಿಸಬೇಕೆಂದು ಪಾಲಕರಿಗೆ ಉಜ್ಜಿನಿ ಜಗದ್ಗುರು ಶ್ರೀ ಸಿದ್ದಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಲಹೆ ನೀಡಿದರು.

ಉಜ್ಜಿನಿ ಸದ್ಧರ್ಮ ಪೀಠದಲ್ಲಿ ಜಾತ್ರೆ ಪ್ರಯುಕ್ತ ಆಯೋಜಿಸಿದ್ದ ಶಿವದೀಕ್ಷಾ ಸಮಾರಂಭದಲ್ಲಿ ಭಾನುವಾರ ಆಶೀರ್ವಚನ ನೀಡಿದರು. ಬಾಲ್ಯಾವಸ್ಥೆಯಲ್ಲೇ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವುದು ಹೆತ್ತವರ ಕರ್ತವ್ಯವಾಗಿದೆ ಎಂದರು. 170 ಜಂಗಮ ವಟುಗಳಿಗೆ ಶಿವದೀಕ್ಷೆ ನೀಡಲಾಯಿತು, ವಿವಿಧ ಮಠಾಧೀಶರು, ಅರ್ಚಕರು, ಭಕ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net