

ಬಾಗಲಕೋಟೆ: ಈಗಿನ ಸ್ಪರ್ದಾತ್ಮಕ ಜಗತ್ತಿನಲ್ಲಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಜೊತೆಗೆ ಪಾಲಕರ ಪಾತ್ರವೂ ಕೊಡಾ ಮಹತ್ವದ್ದಾಗಿದೆ, ಅದಲ್ಲದೆ ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ ಎಂದು ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಆರ್.ಗಿರೀಶ ಹೇಳಿದರು.
ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಬರೀ ಶಿಕ್ಷಕರಷ್ಟೆ ಶ್ರಮಿಸದೆ ಪಾಲಕರೂ ಪರಿಶ್ರಮ ಪಡಬೇಕು. ಮಕ್ಕಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿ ಮೊಬೈಲ್ ಪೋನ್ ಬಳಕೆ ಹೆಚ್ಚಾಗಿರುವ ಕುರಿತು ಕಳವಳ ವ್ಯಕ್ತ ಪಡಿಸಿದರು.
ಪ್ರಾಚಾರ್ಯ ಡಾ.ಎನ್.ಎಚ್.ಬೇವಿನಹಳ್ಳಿ ಮಾತನಾಡಿ, ಮಕ್ಕಳಿಗೆ ಮೌಲ್ಯಗಳನ್ನು ಕಲಿಸಬೇಕು. ಮೊಬೈಲ್ ಪೋನ್ ಬಳಕೆ ಕಡಿಮೆ ಮಾಡಬೇಕು. ಅವರ ಚಟುವಟಿಕೆ, ಬೆಳವಣಿಗೆ ಬಗ್ಗೆ ಪಾಲಕರು ಗಮನ ಹರಿಸಬೇಕು. ವೃತ್ತಿಪರ ಕೋರ್ಸಗಳ ಬಗ್ಗೆ ಅವರಿಗೆ ತಿಳಿಸಿ ಹೇಳಬೇಕು ಎಂದರು.
ಐ.ಎಸ್.ಸಂಕಿನಮಠ, ಬಿ.ಎಂ.ಸೊನಕನಾಳ ಇತರರು ಇದ್ದರು. ಎ.ಡಿ.ಮೋಮಿನ್ ವಂದಿಸಿದರು