

ರಾಯಬಾಗ: ಮಕ್ಕಳ ಮನಸ್ಸಿನಲ್ಲಿ ಒಳ್ಳೆಯ ಆಚಾರ- ವಿಚಾರ ತುಂಬಿ ಸಂಸ್ಕಾರಯುತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆದರ್ಶ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಎಂ.ಎನ್.ಐಹೊಳೆ ಸ್ವತಂತ್ರ ಪದವಿಪೂರ್ವ ಕಾಲೇಜ್ ವಾರ್ಷಿಕ ಸ್ನೇಹ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ರಬಕವಿ ಜಾನಪದ ವಿದ್ವಾಂಸ ಶ್ರೀಕಾಂತ ಕೆಂದೊಳ್ಳಿ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿ ದಾರಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಭಾರತೀಯ ಸಂಸ್ಕೃತಿ ಬಗ್ಗೆ ತಿಳಿಸುವ ಕಾರ್ಯ ಶ್ಲಾಘನೀಯ ಎಂದರು.
ಸಂಸ್ಥೆ ಕಾರ್ಯದರ್ಶಿ ಅರುಣ ಐಹೊಳೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ತಂದೆ-ತಾಯಿಯಂದಿರ ಪಾದಪೂಜೆ ಮಾಡುವ ಕಾರ್ಯಕ್ರಮ ನಡೆಯಿತು. ತಹಸೀಲ್ದಾರ್ ಸುರೇಶ ಮುಂಜೆ, ಸಿ.ಆರ್.ಪಿ ರಾಜು ಕುರಾಡೆ, ಮಾಯವ್ವ ಐಹೊಳೆ, ಬಸವರಾಜ ಸನದಿ, ಸದಾನಂದ ಹಳಿಂಗಳಿ, ಪೃಥ್ವಿರಾಜ ಜಾಧವ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪೂರೆ, ಎಸ್.ಎಸ್.ಕಾಂಬಳೆ, ಸಂಗನಗೌಡ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ ಇತರರಿದ್ದರು.
ಮುಖ್ಯೋಪಾಧ್ಯಾಯ ಬಿ.ಬಿ.ಪೂಜಾರ ಸ್ವಾಗತಿಸಿದರು. ಪ್ರಾಚಾರ್ಯ ಎಂ.ಎಲ್.ಗಿಜ್ಜನ್ನವರ ನಿರೂಪಿಸಿದರು.