ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ ಬೆಳೆಸಬೇಕು

29CBP2
Published on

ಚಿಕ್ಕಬಳ್ಳಾಪುರ : ಮಕ್ಕಳು ವೈಜ್ಞಾನಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಾಣಾಧಿಕಾರಿ ಎಸ್.ಸಿ.ಪದ್ಮರಾಜು ತಿಳಿಸಿದರು.

ತಾಲೂಕಿನ ಅಂಗರೇಖನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಶನಿವಾರ ಆಯೋಜಿಸಿದ್ದ ಮಕ್ಕಳ ವಿಜ್ಞಾನ ಹಬ್ಬ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ, ತಾರ್ಕಿಕತೆ ಹಾಗೂ ಪ್ರಶ್ನಿಸುವ ಮನೋಭಾವ ಬೆಳೆಸಬೇಕು. ಇದಕ್ಕೆ ಪೂರಕವಾದ ಕ್ರಿಯಾಶೀಲ ಚಟುವಟಿಕೆಯ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಪ್ರತಿಯೊಬ್ಬರಲ್ಲೂ ಪ್ರತಿಭೆ, ಚೈತನ್ಯ ಇರುತ್ತದೆ. ಇದನ್ನು ಗುರುತಿಸಿ ಅಗತ್ಯ ಮಾರ್ಗದರ್ಶನ ನೀಡಬೇಕಾಗುತ್ತದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಲಾ ಮಾತನಾಡಿ, ಸತತ ಪ್ರಯತ್ನದಿಂದ ನಿರ್ದಿಷ್ಟ ಗುರಿ ಸಾಧಿಸಬಹುದು ಎಂದು ತಿಳಿಸಿದರು. ವಿಷಯ ಪರಿವೀಕ್ಷಕರಾದ ಶಮೀರ್ ಪಾಷಾ, ಶಿವಪ್ರಕಾಶ್ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಸರಳ ಸೂತ್ರ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ, ರಾಜೀವ್ ಗೌಡ, ಕಲಾಧರ್ ವಿಜ್ಞಾನ ಹಬ್ಬ ಚಟುವಟಿಕೆ ನಡೆಸಿಕೊಟ್ಟರು.

ಗ್ರಾಪಂ ಅಧ್ಯಕ್ಷ ಸರೋಜಮ್ಮ, ಉಪಾಧ್ಯಾಕ್ಷ ರವಿಶಂಕರ್, ಪಿಡಿಒ ಅಶೋಕ್, ಮುಖ್ಯ ಶಿಕ್ಷಕಿ ಆಶಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net