ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಬೆಳೆಯಲಿ

12blk1
 ಭಾಲ್ಕಿಯ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಶರಣರ ಕುರಿತ ವಿವಿಧ ಸ್ಪರ್ಧೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಚೆನ್ನಬಸಪ್ಪ ಹಳ್ಳದ ಉದ್ಘಾಟಿಸಿದರು. ಶಶಿಧರ ಕೋಸಂಬೆ, ಶಂಭುಲಿಂಗ ಕಾಮಣ್ಣ ಇತರರಿದ್ದರು.
Published on

ಭಾಲ್ಕಿ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವುದು ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚೆನ್ನಬಸಪ್ಪ ಹಳ್ಳದ ಹೇಳಿದರು.

ಪಟ್ಟಣದ ಚನ್ನಬಸವಾಶ್ರಮ ಪರಿಸರದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ವಿಶ್ವಬಸವಧರ್ಮ ಟ್ರಸ್ಟ್ ವತಿಯಿಂದ ೪೫ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ-೨೦೨೪ ನಿಮಿತ್ತ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಶರಣರ ಕುರಿತ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಟಿವಿ, ಮೊಬೈಲ್ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಓದುವ ಹವ್ಯಾಸ, ನೆನಪಿನ ಶಕ್ತಿ ಕಡಿಮೆಯಾಗುತ್ತಿದೆ. ಸಂಸ್ಕಾರ, ಸಂಸ್ಕೃತಿ ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದರಿಂದ ಹೊರ ಬರಲು ಮಕ್ಕಳು ಓದಿನ ಜತೆಗೆ ಬಸವಾದಿ ಶರಣರ ಚರಿತ್ರೆ ಅಧ್ಯಯನ ಮಾಡಬೇಕು. ವಚನ ಸಾಹಿತ್ಯ ಮನುಷ್ಯನ ಬದುಕಿಗೆ ಪೂರಕವಾಗಿದೆ. ಪ್ರತಿಯೊಬ್ಬರೂ ವಚನಗಳ ಬಗ್ಗೆ ತಿಳಿದು ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಮಾತನಾಡಿದರು.

ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಗುಂಡಪ್ಪ ಸಂಗಮಕರ, ಬಂಡೆಪ್ಪ ಶರಣರು, ಶಿವಾಜಿರಾವ ಸಗರ, ಸಾಹಿತಿ ರಾಜು ಜುಬರೆ, ಸಂತೋಷ ನಾಟೇಕರ, ನಿರ್ಣಾಯಕರಾದ ಲಕ್ಷ್ಮಣ ಮೇತ್ರೆ, ಬಸವರಾಜ ಪ್ರಭಾ ಇತರರಿದ್ದರು.

ಗುರುಪ್ರಸಾದ ಶಾಲೆಯ ಮುಖ್ಯಗುರು ಬಾಬು ಬೆಲ್ದಾಳ ಪ್ರಾಸ್ತಾವಿಕ ಮಾತನಾಡಿದರು. ಈಶ್ವರ ರುಮ್ಮಾ ನಿರೂಪಣೆ ಮಾಡಿ ವಂದಿಸಿದರು.

ಸ್ಪರ್ಧೆಗಳಲ್ಲಿ ಸೋಲು-ಗೆಲುವು ಎನ್ನುವುದಕ್ಕಿಂತ ಭಾಗವಹಿಸುವುದು ಮುಖ್ಯ. ಶಾಲಾ -ಕಾಲೇಜು ಮಕ್ಕಳು ತಾಲೂಕು, ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು.

| ಶಶಿಧರ ಕೋಸಂಬೆ ಸದಸ್ಯರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಮಕ್ಕಳಲ್ಲಿ ಶರಣ ತತ್ವ ಪರಿಚಯಿಸುವ ಉದ್ದೇಶದಿಂದ ಅನುಭವ ಮಂಟಪ ಉತ್ಸವ ನಿಮಿತ್ತ ಶರಣರ ವಿವಿಧ ಸ್ಪರ್ಧೆ ಏರ್ಪಡಿಸಿದ್ದು ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು.

| ಶಂಭುಲಿಂಗ ಕಾಮಣ್ಣ ಅಧ್ಯಕ್ಷ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಬೀದರ್

========

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net