ಮಕ್ಕಳಿಂದ ಪಾಲಕರ ಪಾದಪೂಜೆ

Gurunanak School
Published on

ಬೀದರ್: ನಗರದ ಗುರುನಾನಕ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತೀಚೆಗೆ ಆಯೋಜಿಸಿದ `ಪಾಲಕರನ್ನು ಗೌರವಿಸಿ-ಸಂಸ್ಕೃತಿ ಉಳಿಸಿ' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲಕರ ಪಾದಪೂಜೆ ಮಾಡಿದರು.

ಶಾಲೆಗೆ ತಂದೆ-ತಾಯಿಯನ್ನು ಕರೆದುಕೊಂಡು ಬಂದಿದ್ದ ವಿದ್ಯಾರ್ಥಿಗಳು, ಅವರನ್ನು ಕುರ್ಚಿ ಮೇಲೆ ಕೂರಿಸಿ ಪಾದಪೂಜೆ ಮಾಡಿ ಪುಷ್ಪಾರ್ಚನೆ ಮಾಡಿ ನಮಿಸಿದರು. ಸಂಸ್ಥೆಯಿಂದ ಪಾಲಕರಿಗೆ ಶಾಲು ಹೊದಿಸಿ ಗೌರವಿಸುವ ಮೂಲಕ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ಮಕ್ಕಳು ಮೊಬೈಲ್ ಬಳಕೆ ಹೆಚ್ಚು ಮಾಡುತ್ತಿರುವುದರಿಂದ ಸಂಸ್ಕಾರ ಹಾಗೂ ಸಂಸ್ಕೃತಿ ಮರೆಯುತ್ತಿದ್ದಾರೆ. ಈ ಸ್ಥಿತಿಯಲ್ಲಿ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ಮಾಡಿ ಭವಿಷ್ಯ ರೂಪಿಸುವ ಜಿಮ್ಮೇದಾರಿ ಪಾಲಕರ ಮತ್ತು ಶಿಕ್ಷಕರ ಮೇಲಿದೆ. ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಸಿಕ್ಕಾಗಲೇ ಮಕ್ಕಳು ಒಳ್ಳೆಯ ನಾಗರಿಕರಾಗಲು ಸಾಧ್ಯ. ಶಾಲೆಗೆ ಬರುವ ಮುನ್ನ ಮಕ್ಕಳು ಮನೆಯಲ್ಲಿನ ಹಿರಿಯರಿಗೆ ವಂದಿಸಿ, ಆಶೀರ್ವಾದ ಪಡೆದುಕೊಳ್ಳಬೇಕು ಎಂದರು.

ಸಂಸ್ಥೆ ಅಧ್ಯಕ್ಷ ಡಾ.ಸರ್ದಾರ್ ಬಲಬೀರಸಿಂಗ್, ಪ್ರಾಚಾರ್ಯರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net