

ನಿಪ್ಪಾಣಿ: ಇಲ್ಲಿನ ಜೊಲ್ಲೆ ಶಿಕ್ಷಣ ಸಂಸ್ಥೆಯ ರಾಣಿ ಚನ್ನಮ್ಮ ಕನ್ನಡ ಮಾಧ್ಯಮ ಶಾಲೆಯ ಹೊಸ ಕಟ್ಟಡದ ನಿರ್ಮಾಣ ಕಾಮಗಾರಿಗೆ ಆಶಾಜ್ಯೋತಿ ವಿಶೇಷ ಮಕ್ಕಳ ವಸತಿ ಶಾಲೆ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಪ್ರಿಯಾ ಜೊಲ್ಲೆ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಪ್ರಿಯಾ ಜೊಲ್ಲೆ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಯ ಮಕ್ಕಳ ಇಂದಿನ ಸ್ಪರ್ಧಾತ್ಮಕ ಅಗತ್ಯತೆ ಅರಿತು ಜೊಲ್ಲೆ ಶಿಕ್ಷಣ ಸಂಸ್ಥೆ ಆಧುನಿಕ ಸೌಲಭ್ಯಗಳುಳ್ಳ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಹೊಸ ಕಟ್ಟಡ ಉದ್ಘಾಟನೆಗೊಳ್ಳಲಿದ್ದು, ಈ ಭಾಗದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ತಿಳಿಸಿದರು.
ಮುಖ್ಯಶಿಕ್ಷಕ ಎಚ್.ಪಿ.ಮಾನಪ್ಪನ್ನವರ, ಸಿಬಿಎಸ್‌ಇ ಶಾಲೆಯ ಪ್ರಾಚಾರ್ಯೆ ಊರ್ಮಿಳಾ ಚೌಗುಲೆ, ಪಪೂ ಪ್ರಾಚಾರ್ಯ ದೀಪಕ ಪಾಟೀಲ, ಅಲೋಕ ಚೌಗುಲೆ, ಸಾಯಿ ಕನ್ಸ್‌ಸ್ಟ್ರಕ್ಷನ್‌ನ ಚಿದಾನಂದ ಕಿಲ್ಲೇದಾರ ಇತರರಿದ್ದರು.