ಮಕ್ಕಳಿಗೆ ಆಸ್ತಿ ಮಾಡುವ ಬದಲು ವಿದ್ಯಾಭ್ಯಾಸ ಕೊಡಿಸಿ

09-07-HNPP 1
Published on

ಹೊಳೆನರಸೀಪುರ: ಮಕ್ಕಳಿಗೆ ಅವರ ಪೋಷಕರು ಆಸ್ತಿ ಮಾಡುವ ಬದಲು ಅವರಿಗೆ ಸರಿಯಾದ ವಿದ್ಯಾಭ್ಯಾಸ ನೀಡಿದರೆ ಸಾಕು. ಅದೇ ಅವರಿಗೆ ನೀಡುವ ದೊಡ್ಡ ಆಸ್ತಿ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.


ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಮೋ ನವೋದಯ ಕೋಚಿಂಗ್ ಸೆಂಟರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ತರಬೇತಿ ಪಡೆದು ನವೋದಯ ಹಾಗೂ ಆದರ್ಶ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು. ಮುಂದಿನ ದಿನಗಳಲ್ಲಿ ನಮೋ ನವೋದಯ ಸಂಸ್ಥೆಯು ನವೋದಯ ಪರೀಕ್ಷೆ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿ, ಅವರ ಭವಿಷ್ಯ ಉಜ್ವಲಗೊಳಿಸುವಂತೆ ಸಲಹೆ ನೀಡಿದರು.


ನಮೋ ನವೋದಯ ಕೋಚಿಂಗ್ ಸೆಂಟರ್‌ನ ಮೋಹನ್, ಪುರಸಭೆ ಮಾಜಿ ಅಧ್ಯಕ್ಷೆ ಜ್ಯೋತಿ ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ, ದೊಡ್ಡ ಕಾಡನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಿವಕುಮಾರಚಾರಿ, ಅರಕಲಗೂಡು ತಾಲೂಕು ವೈದ್ಯಾಧಿಕಾರಿ ಪುಷ್ಪಲತಾ, ಮಲ್ಲಿಕಾರ್ಜುನ್ ಇತರರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net