ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಣೆ

22rajesh4
Published on

ಚಾಮರಾಜನಗರ: ತಾಲೂಕಿನ ಕೆಂಪನಪುರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಲವಾರು ದಾನಿಗಳ ಸಹಕಾರದಿಂದ ಶನಿವಾರ ಉಚಿತವಾಗಿ ಬ್ಯಾಗ್‌ಗಳನ್ನು ವಿತರಣೆ ಮಾಡಲಾಯಿತು.

ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರಿನ ಗೌರಿಶಂಕರ ನಗರದ ನಿವಾಸಿಗಳಾದ ನಿವೃತ್ತ ದಫೇದಾರ್ ಬಸವರಾಜಪ್ಪ ಮತ್ತು ಮಕ್ಕಳಾದ ವಿನಯ್ ಕುಮಾರ್, ವಿಜಯಕುಮಾರ್ ದಾನಿಗಳು ಮಕ್ಕಳಿಗೆ ಉಚಿತವಾಗಿ ಬ್ಯಾಗ್‌ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಸಿ.ನಾಗರಾಜು, ಕೆ.ಎಂ.ಗುರುಸಿದ್ದಪ್ಪ, ಪ್ರಭುಸ್ವಾಮಿ, ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ, ಮಹದೇವಪ್ಪ, ಮಮತಾ ನಂಜಯ್ಯ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಾದೇವಸ್ವಾಮಿ, ಸದಸ್ಯ ಕಂಠಿ ಹಾಗೂ ಶಿಕ್ಷಕ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net