ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

02. HBH. 2
Published on

ಹಗರಿಬೊಮ್ಮನಹಳ್ಳಿ: ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ತಾಲೂಕು ಆಡಳಿತದಿಂದ ವಚನಕಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.

ಕುರುಹೀನ ಶೆಟ್ಟಿ ಸಮಾಜದ ತಾಲೂಕು ಅಧ್ಯಕ್ಷ ಗೋಟೂರು ಮಲ್ಲಣ್ಣ ಮಾತನಾಡಿ, ದೇವರ ದಾಸಿಮಯ್ಯ ಅವರ ತತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಶಿಕ್ಷಣದಿಂದ ಸಾಧನೆ ಸಾಧ್ಯ. ಇದರಿಂದಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ನಮ್ಮ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜಮುಖಿಯಾಗುವಂತೆ ಪಾಲಕರು ಪ್ರಯತ್ನಿಸಬೇಕೆಂದು ತಿಳಿಸಿದರು.

ನೇಕಾರ ಸಮಾಜದ ತಾಲೂಕು ಅಧ್ಯಕ್ಷ ಜಾಣ ಶಿವಾನಂದ, ಉಪಾಧ್ಯಕ್ಷ ಸಮಗಂಡಿ ನಾಗರಾಜ್, ಕಾರ್ಯದರ್ಶಿ ಗೋಟೂರು ಮಂಜುನಾಥ, ದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ವಿರೂಪಾಕ್ಷ, ಶಂಕರಾನಂದ, ಅಗಳಿ ಅಶೋಕ, ಬೆಟಗೇರಿ ನಾಗರಾಜ, ಗೋಟೂರು ಉದಯ, ಉಪ ತಹಸೀಲ್ದಾರ್ ಶಿಲ್ಪಾ ಮೇಟಿ, ಮಡ್ಡಿಕಟ್ಟಿ ನಾಗರಾಜ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net