ಮಕ್ಕಳಿಗೆ ಉತ್ತಮ ಶಿಕ್ಷಣದ ಅಗತ್ಯವಿದೆ

h25-munavalli
Published on

ಕುಂದಗೋಳ: ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ಶಿಕ್ಷಣ ಒದಗಿಸುವ ಶಾಲೆಗಳ ಸ್ಥಾಪನೆಯ ಅಗತ್ಯವಿದೆ ಎಂದು ಕೆಎಲ್​ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.

ಸ್ಥಳೀಯ ಸವೋದಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸವೋದಯ ಗ್ರಾಮೀಣ ಶಿಕ್ಷಣ ಸಮಿತಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಶ್ಲಾಘಿಸಿದರು. ಮಾಜಿ ಯೋಧ ಮಂಜುನಾಥ ಅಳಗವಾಡಿ ಸೇರಿ ಅನೇಕ ಗಣ್ಯರನ್ನು ಗೌರವಿಸಲಾಯಿತು. ಕಲ್ಯಾಣಪುರಮಠದ ಶ್ರೀ ಬಸವಣ್ಣಜ್ಜ ಸಾನ್ನಿಧ್ಯ ವಹಿಸಿದ್ದರು. ಕಚುಸಾಪ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು, ವಿಜಯಕುಮಾರ ಶೆಟ್ಟರ್, ಬಾಬಣ್ಣ ಧಾರವಾಡಶೆಟ್ರು, ಗಂಗಾಧರ ಕುನ್ನೂರ, ಜಯತೀರ್ಥ ಜೋಶಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜ್ಯೋತಿ ಪರಕಾಳೆ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ನಾಗರಾಜ ಧಾರವಾಡಶೆಟ್ರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಿಲಕುಮಾರ ಧಾರವಾಡ ವಂದಿಸಿದರು. ನಂತರ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net