ಮಕ್ಕಳಿಗೆ ಉತ್ತಮ ಸಂಸ್ಕಾರ ತುಂಬಬೇಕು : ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ

shrikrishan dhama
Published on

ಮೈಸೂರು: ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ, ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ ಹೇಳಿದರು.

ಸರಸ್ವತಿಪುರಂನ ಶ್ರೀ ಕೃಷ್ಣಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಶನಿವಾರ ಹಮ್ಮಿಕೊಂ ಡಿದ್ದ ಉಚಿತ ಸಂಸ್ಕಾರ ವಾಹಿನಿ ಶಿಬಿರದ ಸಮಾರಂಭ ಸಮಾರಂಭದಲ್ಲಿ ಮಾತನಾಡಿ, ಜೀವನದಲ್ಲಿ ಧಾರ್ಮಿಕ ಚಿಂತನೆ ಅಗತ್ಯ. ಬಾಲ್ಯದಿಂ ದಲೇ ದೇವರ ಬಗ್ಗೆ ನಂಬಿಕೆ ಹಾಗೂ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಜಾ ದಿನಗಳಲ್ಲಿ ಮಕ್ಕಳು ಮೊಬೈಲ್, ಟಿ.ವಿಯಲ್ಲಿ ಕಳೆದು ಹೋಗುತ್ತಿದ್ದಾರೆ. ಹಾಗಾಗಿ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರದ ಬೀಜ ಬಿತ್ತಿ, ದೇಶದ ಸುಸಂಸ್ಕೃತ ಪ್ರಜೆಗಳನ್ನಾಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಿದ್ದೇವೆ ಎಂದರು.

ಈ ಸಂದರ್ಭ ವಿದ್ವಾನ್ ಡಾ.ಆನಂದತೀರ್ಥ ನಾಗಸಂಪಿಗೆ ಆಚಾರ್ಯ, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ, ಪಿ.ಎಸ್. ಶೇಖರ್, ಕಾರ್ಯದರ್ಶಿ ಕೆ.ವಿ.ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್, ಖಜಾಂಚಿ ಶ್ರೀವತ್ಸ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net