ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ

05ydg05
Published on


ಯಾದಗಿರಿ: ಕೂಲಿ ಹಣದ ಆಸೆಗೆ ಪಾಲಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೆ, ಶಿಕ್ಷಣ ಕೊಡಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಕಿವಿಮಾತು ಹೇಳಿದರು.
ಶಹಾಪುರ ನಗರದಲ್ಲಿ ಸೋಮವಾರ ಜಿಲ್ಲಾಡಳಿತ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಪಾನ್ ಇಂಡಿಯಾ ಅಭಿಯಾನದಡಿ ಬಾಲ ಕಾರ್ಮಿಕ ಮಕ್ಕಳ ಪುನರ್ವಸತಿ ಮತ್ತು ರಕ್ಷಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಸರಕಾರ ಇತ್ತೀಚಿನ ದಿನಗಳಲ್ಲಿ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರತಿ ಮಗು ಕಡ್ಡಾಯವಾಗಿ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ನಿಯಮವಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಹೊನಾಲೆ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿಷೇಧಿಸಲು 1986 ತಿದ್ದುಪಡಿ ಕಾಯ್ದೆ 2016ರನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆ ಅನ್ವಯ ಎಲ್ಲ ಉದ್ದಿಮೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ಅಪರಾಧವಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಸಿವಿಲ್ ನ್ಯಾಯಧೀಶ ಬಸವರಾಜ, ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ತಹಸೀಲ್ದಾರ್ ಉಮಾಕಾಂತ, ಬಾಲಕಾಮರ್ಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕರಾದ ಸಾಬೇರಾ ಬೇಗಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net