

ಹುಮನಾಬಾದ್: ಕ್ಷೇತ್ರದಲ್ಲಿ ವಿವಿಧ ಇಲಾಖೆಯಡಿ ನಡೆಯುತ್ತಿರುವ ವಸತಿ ನಿಲಯ ಹಾಗೂ ವಸತಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ಆಹಾರ ಹಾಗೂ ಅಗತ್ಯ ಮೂಲಸೌಲಭ್ಯ ಪೂರೈಸುವಲ್ಲಿ ವಿಶೇಷ ಕಾಳಜಿ ವಹಿಸಬೇಕು. ಇವುಗಳ ಕೊರತೆ ಬಗ್ಗೆ ವಿದ್ಯಾರ್ಥಿ ಹಾಗೂ ಪಾಲಕರಿಂದ ದೂರು ಬಂದಲ್ಲಿ ಸಂಬAಧಿತರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲï ಎಚ್ಚರಿಕೆ ನೀಡಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಶನಿವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಮನಾಬಾದ್, ಚಿಟಗುಪ್ಪ ಮತ್ತು ಬಸವಕಲ್ಯಾಣ ತಾಲೂಕಿನ ಬಾಲಕ ಮತ್ತು ಬಾಲಕಿಯರ ಮೂರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಇಂದಿರಾಗಾಂಧಿ ವಸತಿ ಶಾಲೆಗಳ ಪ್ರಾಂಶುಪಾಲರ ಹಾಗೂ ತಾಲೂಕು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಸತಿ ನಿಲಯಗಳ ಪ್ರಗತಿ ವರದಿ ಪರಿಶೀಲಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಲ ವಸತಿ ಶಾಲೆಗಳಲ್ಲಿ ಆಹಾರ ಕಲಬೆರಕೆಯಿಂದ ಮಕ್ಕಳು ಅಸ್ವಸ್ಥಗೊಳ್ಳುತ್ತಿರುವುದು ವಿಷಯ ಬೇಸರ ಉಂಟು ಮಾಡಿದೆ. ತಮ್ಮ ತಮ್ಮ ವಸತಿ ನಿಲಯಗಳಲ್ಲಿ ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಂಗ್ರಹಣೆ ಮಾಡುವುದು. ಮಕ್ಕಳು ಉಪಯೋಗಿಸುವ ಶೌಚಗೃಹ, ನಿದ್ರೆ ಕೋಣೆ, ಆಟದ ಮೈದಾನ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಲು, ದೈನಂದಿನ ದಿನಗಳಲ್ಲಿ ಮಕ್ಕಳಿಗೆ ವಿತರಿಸುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನನ್ನ ಮತಕ್ಷೇತ್ರಗಳಲ್ಲಿ ವಸತಿ ಶಾಲೆಗಳಲ್ಲಿ ಸಂಭವಿಸಿರುವ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ವಸತಿ ನಿಲಯಗಳಧಿಕಾರಿಗಳು ನಿಗಾವಹಿಸಲು ತಿಳಿಸಿದರು. ವಿವಿಧ ವಸತಿ ಶಾಲೆಗಳಲ್ಲಿ ಅಭಿವೃದ್ದಿ ಕಾರ್ಯಗಳ ಕುರಿತು ಅಧಿಕಾರಿ ವೃಂದವರಿಂದ ಮನವಿ ಪತ್ರವನ್ನು ಸ್ವೀಕರಿಸಿ ಸ್ಪಂದಿಸುವ ಭರವಸೆ ನೀಡಿದರು.
ತಾಲೂಕು ಸಮಾಜ ಇಲಾಖೆ ಸಹಾಯ ನಿರ್ದೇಶಕರಾದ ನಿಂಗರಾಜ ಅರಸ್, ಮಂಜುನಾಥ ಬಿರಾದಾರ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿಗಳಾದ ವಿಠಲ್ ಸೇಡಂಕರ, ವಿ.ಬಿ ಹೀರೆಗೌಡ. ಮೂರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಶುಂಪಾಲರಾದ ಶಕುಂತಲಾ ಪಾಟೀಲ್, ದೇವಿಂದ್ರ ಕಾಳಪ್ಪ, ಅಲ್ಪ ಸಂಖ್ಯಾತರ ಅಧಿಕಾರಿಯಾದ ಶಿವಕುಮಾರ ಕುಪ್ಪೆ, ಲಕ್ಷ್ಮೀ ನಾಯಕ ಇತರರಿದ್ದರು.