ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ

ydg01
Published on

ಯಾದಗಿರಿ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸುವುದರ ಜತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಅದಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ತಾಪಂ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ತಾಲೂಕು ಪ್ರಗತಿ ಪರಿಶೀಲಾ ಸಭೆಯಲ್ಲಿ ಮಾತನಾಡಿದ ಅವರು, ಫಲಿತಾಂಶದಲ್ಲಿ ಜಿಲ್ಲೆ ಕೊನೇ ಸ್ಥಾನದಲ್ಲಿದ್ದು, ಇದನ್ನು ಸುಧಾರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಾಗೊಂದು ವೇಳೆ ನಿರ್ಲಕ್ಷÈ ವಹಿಸಿದ್ದಲ್ಲಿ ಶಿಕ್ಷಣ ಇಲಾಖೆ ಅದಿಕಾರಿಗಳು ಶಿಕ್ಷಕರು ಮತ್ತು ಅತಿಥಿ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ಕೂಡಲೇ ಪಠ್ಯಪುಸ್ತಕ, ಸಮವಸ್ತç ವಿತರಣೆ ಮಾಡಿ, ಇಲ್ಲದಿದ್ದರೆ ಸರ್ಕಾರಕ್ಕೆ ಕೆಟ್ಟು ಹೆಸರು ಬರುತ್ತದೆ. ಶಾಲೆಯಲ್ಲಿ ಕುಡಿಯುವ ನೀರಿನ ಘಟಕಗಳ ಹಾಗೂ ಶೌಚಗೃಹ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೊಂದು ವೇಳೆ ಅಗತ್ಯವಿದ್ದಲ್ಲಿ ಪಟ್ಟಿಮಾಡಿ ಸಲ್ಲಿಸಬೇಕು ಎಂದರು.

ಮುAಗಾರು ಪೂರ್ವ ಮಳೆಯಾಗಿದ್ದರಿಂದ ರೈತರು ಬಿತ್ತನೆ ಮಾಡಿದ್ದಾರೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಕೊರತೆಯಿಂದ ಬೆಳೆಗಳು ಬಾಡುವ ಆತಂಕ ಇದೆ. ಈ ವಾರದಲ್ಲಿ ಮಳೆಯಾಗದಿದ್ದರೆ ಸಮಸ್ಯೆ ಆಗಲಿದೆ ಎಂದು ಕೃಷಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಜೆಜೆಎA ಯೋಜನೆಯಲ್ಲಿ ಮೊದಲ ಹಂತದಲ್ಲಿ ಕೈಗೊಂಡ ಎಲ್ಲ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಲವೆಡೆ ಜನರು ದೂರು ನೀಡುತ್ತಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ನೀರು ಒದಗಿಸುವ ಕೆಲಸ ಮಾಡಲಾಗುವುದು. ಕೆಲವೆಡೆ ಕಾಮಗಾರಿ ಪೂರ್ಣಗೊಂಡರೂ, ಹಸ್ತಾಂತರ ಮಾಡಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಯಾದಗಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ವಡಗೇರಾ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ, ಶಹಾಪುರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ಹಾಗೂ ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net