

ಚಿಕ್ಕೋಡಿ(ಮಾಂಜರಿ): ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಕಾಣುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನವಿಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ಕೆಎಲ್ಈ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರ ಪ್ರಭಾಕರ್ ಕೋರೆ ಹೇಳಿದರು.
ಶುಕ್ರವಾರ ರಾಯಬಾಗ ತಾಲೂಕಿನ ಯಡ್ರಾಂವದಲ್ಲಿರುವ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿರುವ ಕೆಎಲ್ಇ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಇತ್ತೀಚೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಶಾಲೆಗಳಲ್ಲಿ ಇಂಗ್ಲೀಷ ಮಾತನಾಡುವುದೇ ಸಾಧನೆಯಾಗುತ್ತಿತು. ಆದರೆ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬರು ಇಂಗ್ಲೀಷ ಭಾಷೆಯನ್ನು ಕಲಿತಿರುವುದು ಇಡೀ ದೇಶಕ್ಕೆ ಹೆಮ್ಮಯ ಸಂಗತಿಯಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಮೂಲಕ ಉತ್ತಮ ಪ್ರಜೆಗಳನ್ನಾಗಿ ಬೆಳೆಸಬೇಕು ಎಂದರು.
ಸಮಾಜ ನಮಗಾಗಿ ಏನು ಕೊಟ್ಟಿದೆ ಎನ್ನವುದಕ್ಕಿಂತ ಸಮಾಜಕ್ಕಾಗಿ ನಾವು-ನೀವು ಏನು? ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ಗ್ರಾಮೀಣ ಗದ ಮಕ್ಕಳು ಐಎಎಸ್, ಕೆಎಎಸ್‌ನಂತಹ ಪರೀಕ್ಷೆಗಳಲ್ಲಿ ಪಾಸಾಗಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಸಮಾಜವೂ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಅಭಿವೃದ್ಧಪತದತ್ತ ಸಾಗವೇಕಾದರೆ ಶಿಕ್ಷಣ ಬೇಕು. ಪ್ರತಿಯೊಬ್ಬರು ಒಗ್ಗಟ್ಟಾಗಿ ಒಂದಾಗಿ ಮಕ್ಕಳ ಶಿಕ್ಷಣದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದರು.
ಈ ವೇಳೆ ಇತ್ತೀಚೆಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ 13 ವಿದ್ಯಾರ್ಥಿಗಳಿಗೆ ಪ್ರಭಾಕರ ಕೋರೆಯವರು ಸನ್ಮಾನಿಸಿದರು ಈ ಕಾರ್ಯಕ್ರಮಕ್ಕೆ ಬಿ.ಎ.ಪಾಟಿಲ್ ಸತ್ಯಪ್ಪ ಬಿಷ್ಟಿ, ಬಾಲಚಂದ್ರ ದತವಾಡೆ, ಕಲ್ಲಪ್ಪ ನಿಂಗನೂರ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಮಲ್ಲಪ್ಪ ಮೈಶಾಳೆ, ಸದಾಶಿವ ನಿಪ್ಪಾಣಿ ಹಾಗೂ ಇನ್ನುಳಿದ ಗಣ್ಯ ನಾಗರಿಕರು ಪಾಲಕರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಜರಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ನಿಗದಿ ಇವರು ಸ್ವಾಗತಿಸಿ ನಿರೂಪಿಸಿ ವಂದಿಸಿದರು
ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಕೆಎಲ್ಇ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಡಾ.ಪ್ರಭಾಕರ ಕೋರೆ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.