ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಶಾಸಕ ಹಿಟ್ನಾಳ

0708-Kpl-Ravi-4
Published on

ಕೊಪ್ಪಳ: ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಬೇಕೆಂದು ಶಾಸಕ ರಾಘವೇಂದ್ರ ಹಿಟ್ನಾಳ ಮನವಿ ಮಾಡಿದರು.


ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಮಿಷಿನ್ ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ಮಾತನಾಡಿದರು.


ಮಕ್ಕಳಿಗೆ ಮುಂದೆ ಬರಬಹುದಾದ ರೋಗಗಳ ನಿಯಂತ್ರಣಕ್ಕೆ ವಿವಿಧ ಲಸಿಕೆ ಹಾಕಿಸಲಾಗುತ್ತದೆ. ಪೋಲಿಯೋ, ದಡಾರ, ರುಬೆಲ್ಲಾ ರೋಗಗಳಿಂದ ರಕ್ಷಣೆ ಪಡೆಯಲು ಲಸಿಕೆ ಹಾಕಿಸಿಕೊಳ್ಳಬೇಕು. ಅರ್ಹ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕುತ್ತಿದ್ದು, ಪಾಲಕರು ಕಾಳಜಿವಹಿಸಿ ಲಸಿಕೆ ಹಾಕಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷೃವಹಿಸಬಾರದು. 5 ವರ್ಷದೊಳಿಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ. ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀರಿ ಲಸಿಕಾಕರಣ ಮಾಡಿ. ಜನರಿಗೆ ಆರೋಗ್ಯ ಕಾಳಜಿ ಬಗ್ಗೆ ಜಾಗೃತಿ ಮೂಡಿಸಿ ಅಭಿಯಾನ ಯಶಸ್ವಿಗೊಳಿಸುವಂತೆ ತಿಳಿಸಿದರು.


ತಾಪಂ ಇಒ ದುಂಡಪ್ಪ ತುರಾದಿ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ, ವೈದ್ಯಾಧಿಕಾರಿಗಳು, ಗ್ರಾಮದ ಪ್ರಮುಖರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net