ಮಕ್ಕಳಿಗೆ ಭಯ ಮುಕ್ತ ವಾತಾವರಣ ಸೃಷ್ಟಿಸಿ

30ydg04
Published on

ಯಾದಗಿರಿ: ಶಾಲೆಗಳಲ್ಲಿ ಮಕ್ಕಳಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವ ಮೂಲಕ ಅವರ ಕಲಿಕೆಗೆ ಪ್ರೋತ್ಸಾಹ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸಲಹೆ ನೀಡಿದರು.

ಮಂಗಳವಾರ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಮಕ್ಕಳ ನ್ಯಾಯ ( ಪೋಷಣೆ ಮತ್ತು ರಕ್ಷಣೆ) ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಆರ್ಟಿಇ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಮತ್ತು ಮಕ್ಕಳ ರಕ್ಷಣಾ ನೀತಿ ಕುರಿತ 2 ದಿನದ ತರಬೇತಿ ಕಾಯರ್ಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಕರ್ಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಮಾತನಾಡಿ, ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಾದ ಅಧಿಕಾರಿಗಳು ಒಬ್ಬರಮೇಲೊಬ್ಬರು ಹಾಕದೆ. ತಕ್ಷಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಎಲ್ಲ ಇಲಾಖೆಗಳ ಪಾತ್ರವೂ ಇದೆ ಎಂದರು.

ಜಿಪಂ ಸಿಇಒ ಗರೀಮಾ ಪನ್ವಾರ್, ಸಾರ್ವಜನಿಕ ಸೇವೆಯಲ್ಲಿರುವ ನಾವುಗಳು ಮಕ್ಕಳಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು. ಅಧಿಕಾರಿಗಳು ಮಕ್ಕಳ ಹಕ್ಕುಗಳ ಬಗ್ಗೆ ಮೊದಲು ಪಾಲಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net