ಮಕ್ಕಳಿಗೆ ಶೇ.100 ಲಸಿಕೆ ಗುರಿ

indradanush nrp
ಎನ್.ಆರ್.ಪುರ ತಾಲೂಕು ಸೀತೂರು ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಇಂದ್ರಧನುಷ್ 5.0 ಅಭಿಯಾನದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ಡಾ.ಸುರೇಶ್, ಪ್ರೇಮಾ, ಸದಸ್ಯ ಎಚ್.ಇ.ದಿವಾಕರ ಇತರರಿದ್ದರು.
Published on

ಎನ್.ಆರ್.ಪುರ: ವರ್ಷದ ಒಳಗಿನ ಮಕ್ಕಳಿಗೆ 12 ಮಾರಕ ರೋಗಗಳ ವಿರುದ್ಧ ಲಸಿಕೆ ಹಾಕಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ ಎಂದು ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಸುರೇಶ್ ತಿಳಿಸಿದರು.

ಬುಧವಾರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪರಿಣಾಮಕಾರಿ ಮಿಷನ್‌ಇಂದ್ರಧನುಷ್ 5.0 ಕಾರ್ಯಕ್ರಮದಲ್ಲಿ ಮಾತನಾಡಿ, 2014ರಿಂದಲೇ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಜಾರಿಯಲ್ಲಿದ್ದರೂ ಅದು ಪರಿಣಾಮಕಾರಿಯಾಗಿರಲಿಲ್ಲ. ಈ ಕಾರ್ಯಕ್ರಮದಡಿ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಪ್ರತಿ ಮನೆ,ಮನೆ ಸರ್ವೆ ನಡೆಸಿದ್ದಾರೆ. ಶೇ.100ರಷ್ಟು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.
ಗ್ರಾಪಂ ಸದಸ್ಯ ಎಸ್.ಉಪೇಂದ್ರ ಮಾತನಾಡಿ, ಆರೋಗ್ಯ ಇಲಾಖೆ ಈಗ ಗ್ರಾಪಂ ಮಟ್ಟದಲ್ಲೂ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮ ನಡೆಯುತ್ತಿದೆ. ಇದರಿಂದ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ವಹಿಸಿದ್ದರು. ನಂತರ ಪರಿಣಾಮಕಾರಿ ಮಿಷನ್ ಇಂದ್ರಧನಷ್ 5.0 ಭಿತ್ತಿ ಪತ್ರಗಳನ್ನು ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ, ಸದಸ್ಯ ಎಚ್.ಇ.ದಿವಾಕರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ, ಇಲಿಯಾಸ್, ಪಿಡಿಒ ಶ್ರೀನಿವಾಸ್, ನಾಗವೇಣಿ, ರಮ್ಯಕೃಷ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net