ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಅವಶ್ಯವಿದೆ

bkt-09-14
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (13, -1); aec_lux: 0.0; hist255: 0.0; hist252~255: 0.0; hist0~15: 0.0;
Published on

ಬಾಗಲಕೋಟೆ : ಪ್ರಸ್ತುತ ದಿನಗಳಲ್ಲಿ ನಮ್ಮ ಮಕ್ಕಳಿಗೆ ಮನೆಯ ಒಳಗಡೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಸಂಸ್ಕಾರಯುತ ಶಿಕ್ಷಣ ಬೋಧನೆಯಾಗುತ್ತಿದೆಯೇ ಎನ್ನುವುದನ್ನು ನಾವೆಲ್ಲ ಗಂಭೀರವಾಗಿ ಆಲೋಚನೆ ಮಾಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿAದ ನವನಗರದ ಕಲಾಭವನದಲ್ಲಿ ಶನಿವಾರ ಸಂಜೆ ನಡೆದ ಬಾಗಲಕೋಟೆ-ವಿಜಯಪುರ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಂದೆ-ತಾಯಿಯರು ಬದುಕಿನಲ್ಲಿ ನಾವು ಕಷ್ಟಪಟ್ಟಷ್ಟು ನಮ್ಮ ಮಕ್ಕಳ ಪಡಬಾರದು ಎಂದು ಬರುವ ಸಂಬಳದೊAದಿಗೆ ಸಾಲವನ್ನು ಮಾಡಿ ನಿಮಗೆ ಶಿಕ್ಷಣವನ್ನು ಪೂರೈಸಿರುತ್ತಾರೆ. ನೀವು ಅಚಲವಾದ ಆತ್ಮವಿಶ್ವಾಸ ಇಟ್ಟುಕೊಂಡು ಅಧ್ಯಯನ ಮಾಡಿದರೆ ನೀವು ಅಂದುಕೊAಡ ಗುರಿ ಕಡೆಗೆ ತಲುಪಲು ಸಾಧ್ಯವಿದೆ. ಸಾಮಾಜಿಕ ಜಾಲತಾಣಗಳನ್ನು ಶಿಕ್ಷಣಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾಲೇಜು ಹಂತದಲ್ಲಿ ಡ್ರಗ್ಸ್ ಮಾಫಿಯಾ ಬಂದಿದೆ. ಯುವ ಸಮೂಹ ಸವಾಲು-ಸಮಸ್ಯೆಗಳ ನಡುವೆ ಎಚ್ಚರಿಕೆಯಿಂದ ಹೆಜ್ಜೆ ಹಾಕಿ ಅಧ್ಯಯನದಲ್ಲಿ ಸಾಧನೆ ಮಾಡುವ ಮೂಲಕ ತಂದೆ-ತಾಯಿಗಳು ನಿಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಹುಸಿಗೊಳಿಸದೇ ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಬೇಕು. ನಿಮ್ಮಲ್ಲಿರುವ ಆತ್ಮವಿಶ್ವಾಸವು ನಿಮಗೆ ಅಸಾಧ್ಯವಾಗಿದ್ದನ್ನು ಸಾಧ್ಯವಾಗಿಸುತ್ತದೆ ಎಂದು ಕಿವಿಮಾತು ಹೇಳಿದರು.

ಕಾರ್ಯಾಂಗ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು ಅವುಗಳಿಗೆ ಪರಿಹಾರ ಕಂಡುಕೊಳ್ಳುವುದೇ ಸಂಘದ ಮುಖ್ಯ ಉದ್ದೇಶವಾಗಿದೆ. ಕಳೆದ ಆರು ವರ್ಷದ ಅವಽಯಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವ ೨೬ ಸರ್ಕಾರಿ ಆದೇಶಗಳನ್ನು ಜಾರಿಗೆ ತರಲಾಗಿದೆ. ಅನಾವಶ್ಯಕ ತೊಂದರೆ ಕೊಡುತ್ತಿದ್ದ ಅನಾಮಧೇಯ ಪತ್ರ, ಮೂಕರ್ಜಿಗಳು ಬಂದರೆ ಯಾವುದೇ ರೀತಿಯ ತನಿಖೆ ಮಾಡದಂತೆ ಆದೇಶ ಮಾಡಲಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಪದ್ಮಶ್ರೀ ಡಾ.ವೆಂಕಪ್ಪ ಸುಗತೇಕರ, ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ತಂದೆ-ತಾಯಿ ಧರ್ಮವಾಗಿದೆ. ಜ್ಞಾನದಿಂದ ಎಲ್ಲಾ ಸಂಪತ್ತು ಬರುತ್ತದೆ. ತಂದೆ-ತಾಯಿಗಳನ್ನು ಮಕ್ಕಳು ಚನ್ನಾಗಿ ನೋಡುವುದು ಕರ್ತವ್ಯವಾಗಿದೆ ಎಂದರು.

ಜಿಲ್ಲಾಽಕಾರಿ ಎಂ.ಸAಗಪ್ಪ ಮಾತನಾಡಿ, ಮಕ್ಕಳ ಸಾಧನೆ ಹಿಂದೆ ಪೋಷಕರ ತ್ಯಾಗ, ಶಿಕ್ಷಕರ ಪರಿಶ್ರಮ ಅಡಗಿರುತ್ತದೆ. ವಿದ್ಯಾರ್ಥಿಗಳು ದೊಡ್ಡ ಗುರಿ ಇಟ್ಟುಕೊಂಡು ಶ್ರಮಪಡಬೇಕು. ಪ್ರತಿಫಲ ದೊರೆಯುತ್ತದೆ. ಮಕ್ಕಳು ಪರೀಕ್ಷೆಗಳಲ್ಲಿ ಅಂಕಗಳನ್ನು ಕಡಿಮೆ ಪಡೆದಾಗ ಅವರನ್ನು ನಿಂದಿಸಬಾರದು. ಅವರು ಮುಂದಿನ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಚೈತನ್ಯಪೂರ್ವಕ ಸಂದೇಶ ನೀಡಬೇಕು ಎಂದರು.

ಜಿಪA ಸಿಇಒ ಶಶಿಧರ ಕುರೇರ ಮಾತನಾಡಿ, ಸರ್ಕಾರಿ ನೌಕರರಿಗೆ ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ಇದೆ. ಕರ್ತವ್ಯವನ್ನು ಚನ್ನಾಗಿ ನಿಭಾಯಿಸಿದರೆ ಎಲ್ಲಾ ಕ್ಷೇತ್ರದಲ್ಲಿ ಗಣನೀಯವಾದ ಬದಲಾವಣೆ ಕಂಡುಕೊಳ್ಳಲು ಸಾಧ್ಯವಿದೆ ಎಂದರು.

ಎಸ್‌ಪಿ ಸಿದ್ದಾರ್ಥ ಗೋಯಲ್, ಪ್ರಧಾನ ಕಾರ್ಯದರ್ಶಿ ಗಿರಿಗೌಡ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಬಸವರಾಜ, ಸುರೇಶ ಶೆಡಶ್ಯಾಳ, ಡಾ.ಸದಾನಂದ ನೇಲ್ಕುದ್ರಿ, ಹರೇರಾಮಕೃಷ್ಣ, ವಿಠ್ಠಲ ವಾಲಿಕಾರ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net