ಮಕ್ಕಳಿಗೆ ಸ್ವತಂತ್ರ ವ್ಯಕ್ತಿತ್ವ ರೂಪಿಸುವ ಶಿಕ್ಷಣ ಸಿಗುವಂತಾಗಲಿ

Vpt-01-27-23 (1)
ಅರಮೇರಿ ಕಳಂಚೇರಿ ಮಠಕ್ಕೆ ಆಗಮಿಸಿದ್ದ ಶಾಸಕ ಎ.ಎಸ..ಪೊನ್ನಣ್ಣ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಮಧೋಶ್ ಪೂವಯ್ಯ, ಕುಸುಮಾ ಇದ್ದರು.
Published on

ವಿರಾಜಪೇಟೆ: ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸವಾಲಿನಜ ಕೆಲಸವಾಗಿದ್ದು, ಇಂತಹ ಪರಿಸ್ಥಿತಿಯಲ್ಲೂ ಮಕ್ಕಳಿಗೆ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವ ಶಿಕ್ಷಣ ಸಿಗಬೇಕಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಮೀಪದ ಅರಮೇರಿ ಕಳಂಚೇರಿ ಮಠದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಅರಿತು ಶಿಕ್ಷಣ ನೀಡಬೇಕು. ಆಗ ಯಶಸ್ಸು ಹಾಗೂ ಸೋಲಿಗೆ ಅವರೇ ಕಾರಣರಾಗುತ್ತಾರೆ ಎಂದರು.

ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಕಡಿಮೆ ಅವಧಿಯಲ್ಲಿ ಕ್ಷೇತ್ರದ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿ ಶಾಸಕ ಸ್ಥಾನ ಅಲಂಕರಿಸಿರುವುದು ಶ್ಲಾಘನೀಯ. ಪೊನ್ನಣ್ಣ ಅವರು ಯಶಸ್ವಿ ವಕೀಲರಾಗಿದ್ದರೂ ತಂದೆಯಂತೆಯೇ ಜನರ ಸೇವೆಗಾಗಿ ರಾಜಕೀಯ ರಂಗಕ್ಕೆ ಬಂದಿರುವುದು ಆಶಾದಾಯಕ ಬೆಳವಣಿಗೆ ಎಂದರು.

ಕಾರ್ಯಕ್ರಮಕ್ಕೆ ಶಾಸಕರನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲಾಯಿತು. ಎಸ್.ಎಂ.ಎಸ್ ವಿದ್ಯಾಪೀಠದ ಪ್ರಾಂಶುಪಾಲೆ ಕುಸುಮಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net