ಮಕ್ಕಳು ಪತ್ರಿಕೆ ಓದುವುದನ್ನು ರೂಢಿಸಿಕೊಳ್ಳಲಿ

13Harugeri1
Published on

ಹಾರೂಗೇರಿ: ದಿನನಿತ್ಯ ಪತ್ರಿಕೆ ಓದುವುದರಿಂದ ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಎಲ್ಲ ವಿದ್ಯಾರ್ಥಿಗಳು ಪತ್ರಿಕೆ ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ.ಸಿ. ಸರಿಕರ ಹೇಳಿದರು.

ಪಟ್ಟಣದ ಶ್ರೀ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸಕಿ ಎಂ.ಜೆ. ಸದಲಗಿ ಮಾತನಾಡಿ, ತಾಯಿ ನೂರು ಜನ ಶಿಕ್ಷಕರಿಗೆ ಸಮ. ಮಕ್ಕಳಿಗೆ ಮೊದಲ ದಾರಿದೀಪವೇ ತಾಯಿಯಾಗಿದ್ದು, ಮಕ್ಕಳಲ್ಲಿ ಉತ್ತಮ ಕನಸು ಬಿತ್ತಬೇಕು ಎಂದರು.

ಪ್ರಾಚಾರ್ಯ ಎಸ್.ಎಸ್. ಅಣ್ಣಿಗೇರಿ ಮಾತನಾಡಿ, ಸಂಸ್ಥೆಯ ವತಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಅಥವಾ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ ೫೦,೦೦೦ ರೂ. ನಗದು ಬಹುಮಾನ ನೀಡುವುದಾಗಿ ತಿಳಿಸಿದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ವಿ.ಎಸ್.ಮಾಳಿ, ನಿರ್ದೇಶಕರಾದ ರಾಮಕೃಷ್ಣ ಯಲಶೆಟ್ಟಿ, ಉಪನ್ಯಾಸಕರಾದ ಎಸ್.ಡಿ. ಮಸ್ಕೆ, ವಿನೋದ ಹೆಗಡೆ, ಎಸ್.ಎಲ್.ಮೊಕಾಶಿ, ಸಾವಿತ್ರಿ ಶೇಗುಣಸಿ, ಸೃಷ್ಟಿ ಶಿರಗೂರೆ, ಅನ್ನಪೂರ್ಣಾ ಪೋಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net