ಮಕ್ಕಳು ಯಾವಾಗಲೂ ಕ್ರೀಯಾಶೀಲರಾಗಿರಬೇಕು

20hgr1
Published on

ಹಲಗೂರು: ಇಲ್ಲಿನ ಜೆಪಿಎಂ ಕಾಲೇಜು ಆವರಣದಲ್ಲಿ ಶುಕ್ರವಾರ 2022-23ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಕೆ.ಅನ್ನದಾನಿ, ಮಕ್ಕಳು ಯಾವಾಗಲೂ ಕ್ರೀಯಾಶೀಲರಾಗಿರಬೇಕು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯ. ವಿದ್ಯಾರ್ಥಿಗಳು ತಮ್ಮಲ್ಲೇ ಇರುವ ಪ್ರತಿಭೆಗೆ ಅನುಗುಣವಾಗಿ ಹೆಚ್ಚಿನ ಶ್ರಮ ಮತ್ತು ಶಿಸ್ತು ರೂಢಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ವಿಯಾಗಲು ಸಹಕಾರಿ ಎಂದರು.


ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ವಿದ್ಯಾರ್ಥಿಗಳು ಮನಸ್ಸನ್ನು ಮಲಿನವಾಗುವುದಕ್ಕೆ ಬಿಡಬಾರದು.ಭವಿಷ್ಯವನ್ನು ರೂಪಿಸಿಕೊಳ್ಳಲು ಮತ್ತು ಬದುಕನ್ನು ಕಟ್ಟಿಕೊಳ್ಳಲು ಅತ್ಯುತ್ತಮ ಕನಸುಗಳನ್ನು ಕಾಣಬೇಕು. ಆ ಕನಸನ್ನು ನನಸು ಮಾಡುವತ್ತ ಹೆಚ್ಚಿನ ಶ್ರದ್ಧೆ, ಪರಿಶ್ರಮ ಹಾಕಿದಾಗ ಉನ್ನತ ಜೀವನ ಮತ್ತು ಸುಂದರ ಬದುಕು ನಿಮ್ಮದಾಗುತ್ತದೆ ಎಂದು ತಿಳಿಸಿದರು.


ಪ್ರೊ.ಬೋರಪ್ಪ ಮಾತಾನಾಡಿದರು. ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿ, ದೈಹಿಕ ಶಿಕ್ಷಣ ಉಪನ್ಯಾಸಕ ಶಶಿಕುಮಾರ್, ದ್ವಿತೀಯ ದರ್ಜೆ ಸಹಾಯಕ ಸೋಮಲಿಂಗೇಗೌಡ , ಶಾಸಕ ಡಾ.ಕೆ.ಅನ್ನದಾನಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರನ್ನು ಸನ್ಮಾನಿಸಲಾಯಿತು.


ಪ್ರಾಂಶುಪಾಲ ವಿಠಲಮೂರ್ತಿ, ಸಂಸ್ಥಾಪಕ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ದೇವೇಗೌಡ, ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿ, ಉಪನ್ಯಾಸಕರಾದ ಶಶಿಕುಮಾರ್, ಮೀನಾಕ್ಷಿ, ಚಂದ್ರು, ಸೋಹೈಲ್ ಅಹಮದ್, ಜಯಂತಿ, ರಾಜೇಶ್, ದಿಬಾ ಕೌಸರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net